ರಾಜ್ಯ ಸುದ್ದಿ

ವಿದ್ಯಾರ್ಥಿಯ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆಗೆ SFI ಖಂಡನೆ

ವರದಿಗಾರ (ಡಿ.20):  ವಿಜಯಪುರದಲ್ಲಿ ನಡೆದ ವಿದ್ಯಾರ್ಥಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಖಂಡಿಸಿದೆ. ಹಾಗೂ ದೌರ್ಜನ್ಯವೆಸಗಿ ಕೊಲೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿದೆ.

ರಾಜ್ಯದಲ್ಲಿ ಪದೇ ಪದೇ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಲೇ ಇವೆ. ಅಧಿಕಾರಿಗಳು ಹಾಗೂ ಸರಕಾರದ ನಿರ್ಲಕ್ಷ್ಯದಿಂದಾಗಿ ಮಹಿಳೆಯರಿಗೆ ಭದ್ರತೆ ಮತ್ತು ರಕ್ಷಣೆ ಇಲ್ಲದಂತಾಗಿದೆ ಎಂದು SFI ಅಭಿಪ್ರಾಯಪಟ್ಟಿದೆ.

ಪೊಲೀಸ್ ಬೀಟ್, ಸಿ.ಸಿ.ಕ್ಯಾಮರಾ, ಹಾಗೂ ಶಾಲಾ- ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸುವಂತೆ ಆದೇಶವಿದ್ದರೂ ಜಾರಿಯಾಗದೇ ಇರುವುದಕ್ಕೆ ಕಳವಳ ವ್ಯಕ್ತಪಡಿಸಿದೆ.

ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರ ರಕ್ಷಣೆಗೆ ಒತ್ತಾಯಿಸಿ ಹಾಗೂ ಬಾಲಕಿಯ ಮೇಲೆ ದೌರ್ಜನ್ಯವೆಸಗಿದ ದುಷ್ಕರ್ಮಿಗಳ ಬಂಧನಕ್ಕಾಗಿ ಹಾಗೂ ಕುಟುಂಬಕ್ಕೆ ಪರಿಹಾರ ನೀಡುವಂತೆ SFI ರಾಜ್ಯಾದ್ಯಕ್ಷರಾದ ವಿ.ಅಂಬರೀಶ್, ರಾಜ್ಯ ಕಾರ್ಯದರ್ಶಿ ಗುರುರಾಜ್ ದೇಸಾಯಿ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group