ವರದಿಗಾರ (20.12.2017) : ವಿಜಯಪುರದ ದಲಿತ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿನಿಯನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡೆಸಿದ್ದನ್ನು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಕ್ಯಾಂಪಸ್ ಫ಼್ರಂಟ್ ಆಗ್ರಹಿಸಿದೆ.
ಈಗಾಗಲೇ ದೇಶದಾದ್ಯಂತ ಹಲವಾರು ಅತ್ಯಾಚಾರ ಕೊಲೆ ಪ್ರಕರಣಗಳು ನಡೆಯುತ್ತಿದ್ದು ,ಇದರ ಮುಂದುವರಿದ ಭಾಗವೆಂಬಂತೆ ಕರ್ನಾಟಕದಲ್ಲೂ ನಡೆದಿದೆ.ಈಗಾಗಲೇ ಮಹಿಳೆಯರ ರಕ್ಷಣೆಗೆ ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಅದು ಸರಿಯಾಗಿ ಜಾರಿಯಾಗುತ್ತಿಲ್ಲ.ಅಲ್ಲದೆ ಈ ಕೃತ್ಯವನ್ನು ಮಾದಕ ವ್ಯಸನಿಗಳು ನಡೆಸಿದ್ದು ಎಂದು ಪ್ರಾಥಮಿಕ ವರದಿ ಬಂದಿದ್ದು,ಸರಕಾರಗಳು ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ.
ಆದುದರಿಂದ ರಾಜ್ಯ ಸರಕಾರವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು ಮತ್ತು ಬಾಲಕಿಯ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ಣಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಕೀರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
