ರಾಜ್ಯ ಸುದ್ದಿ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ

ವರದಿಗಾರ (ಡಿ.21): 8 ತಾಲೂಕು ಪಂಚಾಯಿತಿ, ‍ನಾಲ್ಕು ಪುರಸಭೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ 12 ಸ್ಥಾನಗಳಿಗೆ ನಡೆದ ಉ‍‍‍ಪ ಚುನಾವಣೆಯಲ್ಲಿ 9 ಸ್ಥಾನಗಳು ಕಾಂಗ್ರೆಸ್‌ ಪಾಲಾಗಿದ್ದು, 2 ಕ್ಷೇತ್ರಗಳಲ್ಲಿ ಜೆಡಿಎಸ್‌ ಹಾಗೂ ಕೇವಲ 1 ವಾರ್ಡ್‌ನಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದ್ದು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಬಿಜೆಪಿ ಹೀನಾಯ ಸೋಲು ಅನುಭವಿಸಿರುವುದು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ನಾಯಕರಲ್ಲಿ ಭಯದ ವಾತಾವರಣ ನಿರ್ಮಿಸಿದೆ.

ಬಾಗೇಪಲ್ಲಿ, ತರೀಕೆರೆ, ಚಾಮರಾಜನಗರ, ಗದಗ, ಬೀಳಗಿ, ಹಿರೇಕೆರೂರ, ಕಲಬುರ್ಗಿ ಹಾಗೂ ಸಿಂಧನೂರು ತಾಲೂಕು ಪಂಚಾಯಿತಿಗಳ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಈ ಪೈಕಿ ಬಾಗೇಪಲ್ಲಿ ಹಾಗೂ ಸಿಂಧನೂರು ತಾಲ್ಲೂಕು ಪಂಚಾಯಿತಿಗಳಲ್ಲಿ ಜೆಡಿಎಸ್‌, ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಿಸಿದೆ ಮತ್ತು ಬೆಂಗಳೂರಿನ ಬೊಮ್ಮಸಂದ್ರ ಪುರಸಭೆಯ ವಾರ್ಡ್‌ 16ರಲ್ಲಿ ಬಿಜೆಪಿ ಜಯಿಸಿದ್ದು, ಮಾನ ಉಳಿಸಿಕೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು, ವಿಜಯಪುರ ಜಿಲ್ಲೆಯ ಇಂಡಿ, ಕಲಬುರ್ಗಿ ಜಿಲ್ಲೆಯ ವಾಡಿ ಪುರಸಭೆಗಳ ತಲಾ ಒಂದು ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ.

ಈ ಕ್ಷೇತ್ರಗಳಿಗೆ  ಡಿಸೆಂಬರ್ 17ರಂದು ಚುನಾವಣೆ ನಡೆದಿತ್ತು. ಬುಧವಾರ ಮತ ಎಣಿಕೆ ನಡೆದಿದ್ದು ಫಲಿತಾಂಶ ಹೊರಬಂದಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group