ಹನಿ ಸುದ್ದಿ

ಬಿಜೆಪಿಯ ಪರಿವರ್ತನಾ ಯಾತ್ರೆಗೆ ಕಪ್ಪು ಬಟ್ಟೆ ಪ್ರದರ್ಶನ

ವರದಿಗಾರ(ಡಿ.21) : ಇಂದು ಸಂಜೆ ಪರಿವರ್ತನಾ ಯಾತ್ರೆಯ ಕಾರ್ಯಕ್ರಮ ಹುಬ್ಬಳ್ಳಿ ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದು, ಇದರಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಭಾಷಣ ಮಾಡಲಿದ್ದಾರೆ. ಚುನಾವಣೆ ಸಮೀಪಿಸುತ್ತಿರುವುದರಿಂದ ಮಹದಾಯಿ ವಿಚಾರವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಹಾಗೂ ಬಿಜೆಪಿ ಪರಿವರ್ತನಾ ಯಾತ್ರೆ ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಹುಬ್ಬಳ್ಳಿಯ ಕೋರ್ಟ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದ್ದು ಈ ಸಂದರ್ಭದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ.

ಡಿ.15ರ ಒಳಗೆ ಮಹದಾಯಿ ಸಮಸ್ಯೆ ಬಗೆಹರಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್‌. ಯಡಿಯೂರಪ್ಪ ಅವರು ಮಾತು ತಪ್ಪಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group