ವರದಿಗಾರ (ಡಿ.23): ನನ್ನ ಮಗಳನ್ನು ಹತ್ಯೆ ಮಾಡಿರುವ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ವಿದ್ಯಾರ್ಥಿನಿಯ ತಂದೆ– ತಾಯಿ ಸಿಐಡಿ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ಬಿಜಾಪುರದ ವಿಜಯಪುರದಲ್ಲಿ 9ನೇ ತರಗತಿಯ ವಿದ್ಯಾರ್ಥಿಯನ್ನು ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿದ ಕಾಮುಕರನ್ನುಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ.
ಸಿಐಡಿ ಅಧಿಕಾರಿಗಳು ತಮ್ಮ ನಿವಾಸಕ್ಕೆ ಭೇಟಿ ನೀಡುತ್ತಿದ್ದಂತೆ, ಗದ್ಗದಿತರಾದ ಪೋಷಕರು ‘ಕೈ ಮುಗಿದು, ನ್ಯಾಯ ಕೊಡಿಸಿ’ ಎಂದು ಕೇಳಿದರು.
ಸಂತ್ರಸ್ತೆಯ ಮನೆಗೆ ಸಚಿವೆ ಉಮಾಶ್ರೀ ಭೇಟಿ ನೀಡಿ ಸಾಂತ್ವನ ಹೇಳಿದರು. ಮರಣೋತ್ತರ ಪರೀಕ್ಷೆಯ ವರದಿ ಬರುತ್ತಿದ್ದಂತೆ, ತನಿಖೆಯನ್ನು ಚುರುಕುಗೊಳಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.
