ಜಿಲ್ಲಾ ಸುದ್ದಿ

ಸರಕಾರಿ ಶಾಲೆಯಲ್ಲಿ ಸೇರಿಸಿ ಮಕ್ಕಳ ಭವಿಷ್ಯ ರೂಪಿಸಿ: ಶಾಸಕ ರಾಜಣ್ಣ ಮನವಿ

ವರದಿಗಾರ-ಶಿಡ್ಲಘಟ್ಟ: ಸರಕಾರಿ ಶಾಲೆಯಲ್ಲಿ ಸೇರಿಸಿ ಮಕ್ಕಳ ಭವಿಷ್ಯ ರೂಪಿಸಿಯೆಂದು ಶಾಸಕ ಎಂ. ರಾಜಣ್ಣ ಮನವಿ ಮಾಡಿಕೊಂಡಿದ್ದಾರೆ. ಆಂಗ್ಲ ಭಾಷೆಯ ವ್ಯಾಮೋಹದಿಂದ ಪೋಷಕರು ಖಾಸಗಿ ಶಾಲೆಗಳತ್ತ ಆಕರ್ಷಿಸುತ್ತಿದ್ದು ಅದನ್ನು ಹೋಗಲಾಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯೊಂದಿಗೆ ಸಮುದಾಯ ಮತ್ತು ಸಂಘ ಸಂಸ್ಥೆಗಳು ಸಹಕಾರ ನೀಡಬೇಕೆಂದು ಶಾಸಕ ಎಂ.ರಾಜಣ್ಣ ಕರೆ ನೀಡಿದ್ದಾರೆ.

ತಾಲೂಕಿನ ದೊಡ್ಡತೇಕಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 53 ಲಕ್ಷ ರೂ. ಗಳ ವೆಚ್ಚದಲ್ಲಿ ನಿರ್ಮಿಸಿರುವ ಸರಕಾರಿ ಪ್ರೌಢಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಿಲ್ಲವೆಂದು ತಪ್ಪು ಕಲ್ಪನೆ ಪೋಷಕರಲ್ಲಿ ಮೂಡಿದೆ ಸರಕಾರಿ ಶಾಲೆಗಳಲ್ಲಿ ಉನ್ನತ ಪದವಿಗಳನ್ನು ಹೊಂದಿರುವ ನುರಿತ ಶಿಕ್ಷಕರು ಭೋಧನೆ ಮಾಡುತ್ತಿದ್ದು, ಪೋಷಕರು ಸರಕಾರಿ ಶಾಲೆಯಲ್ಲಿ ಮಕ್ಕಳನ್ನು ಸೇರಿಸಿ ಭವಿಷ್ಯ ರೂಪಿಸಬೇಕೆಂದು ಮನವಿ ಮಾಡಿದರು. ಗ್ರಾಮೀಣ ಪ್ರದೇಶದಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಕೋಟ್ಯಾಂತರ ರೂ. ಗಳನ್ನು ಖರ್ಚು ಮಾಡುತ್ತಿದೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಸಮವಸ್ತ್ರ, ಸೈಕಲ್, ಶೂ ಸಾಕ್ಸ್ ಳನ್ನು ನೀಡಿ ಮೂಲಭೂತ ಸೌಲಭ್ಯಗಳ್ನು ಒದಗಿಸುತ್ತಿದ್ದು ಜನಪ್ರತಿನಿಧಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬಿಇಓ ಎಸ್.ರಘುನಾಥ್‍ ರೆಡ್ಡಿ, ತಾ.ಪಂ. ಅಧ್ಯಕ್ಷ ಕೆ.ಲಕ್ಷ್ಮೀ ನಾರಾಯಣರೆಡ್ಡಿ, ಜಿ.ಪಂ. ಸದಸ್ಯ ಬಂಕ್ ಮುನಿಯಪ್ಪ, ಡಾ.ಜಯರಾಂ ರೆಡ್ಡಿ, ದೊಡ್ಡತೇಕ ಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಮುದ್ದ ಲಕ್ಷಮ್ಮ ಗಂಗ ರೆಡ್ಡಿ, ಗ್ರಾ.ಪಂ. ಸದಸ್ಯ ಮುರಳಿ, ನಗರ ಸಭಾಧ್ಯಕ್ಷ ಬಿ.ಅಫ್ಸರ್‍ಪಾಷ, ಮುಖಂಡರಾದ ರಹಮತ್ತುಲ್ಲಾ, ಕನಕ ಪ್ರಸಾದ್, ಹೆಚ್.ಕ್ರಾಸ್ ರವಿ ಮತ್ತಿತರರು ಉಪಸ್ಥಿತರಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group