ವರದಿಗಾರ (ಡಿ.26): ಬಿಜೆಪಿ ಗುಜರಾತಿನಲ್ಲಿ ಆರನೇ ಬಾರಿ ಸರಕಾರ ರಚಿಸಿದ್ದು, ಮುಖ್ಯಮಂತ್ರಿಯಾಗಿ ಎರಡನೇ ಬಾರಿ ವಿಜಯ್ ರೂಪಾನಿ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಪಾಲ ಓಂ ಪ್ರಕಾಶ್ ಕೊಹ್ಲಿ ಅವರು ಪ್ರಮಾಣ ವಚನ ಬೋಧಿಸಿದರು.
ಉಪಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ಹಾಗೂ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ಹಿರಿಯ ಮುಖಂಡ ಎಲ್.ಕೆ ಅಡ್ವಾಣಿ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
