ರಾಜ್ಯ ಸುದ್ದಿ

9 ಲಿಂಗಾಯತ ಸಂಸದರಿದ್ದರೂ, ಆರೆಸ್ಸೆಸ್ ಯಾರನ್ನು ಸಚಿವರನ್ನಾಗಿ ಮಾಡಿದೆ: ಬಸವರಾಜ ಹೊರಟ್ಟಿ

ವರದಿಗಾರ (ಡಿ.30): ‘9 ಲಿಂಗಾಯತ ಸಂಸದರಿದ್ದರೂ, ಯಾರನ್ನು ಸಚಿವರನ್ನಾಗಿ ಮಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಇವರೆನ್ನೆಲ್ಲಾ ಗುಡಿಯ ಹೊರಗೇ ಇಟ್ಟಿದ್ದಾರೆ. ಯಾರನ್ನು ಎಲ್ಲಿ ಇಡಬೇಕೆಂಬುದು ಆರೆಸ್ಸೆಸ್ ಗೆ ಚೆನ್ನಾಗಿ ಗೊತ್ತಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ

ಅವರು ಹಾವೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರು.

‘ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ, ಬಿ.ಎಸ್. ಯಡಿಯೂರಪ್ಪರ ಬದಲಿಗೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ’ ಎಂದು ಭವಿಷ್ಯ ನುಡಿದಿದ್ದಾರೆ.

ಮಹದಾಯಿ ವಿಚಾರವಾಗಿ ಮಾತನಾಡುತ್ತಾ, ‘ಪ್ರಧಾನಿ ನರೇಂದ್ರ ಮೋದಿ ಯವರು ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಹದಾಯಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು. ಅದು ಬಿಟ್ಟು ಪತ್ರದಿಂದ ವಿವಾದ ಬಗೆಹರಿಯುವುದಿಲ್ಲವೆಂದಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಬದಲು ಪ್ರಧಾನಿ ಮೋದಿಗೆ ಮನವಿ ಮಾಡಿಕೊಂಡು ತಮ್ಮ ಬೇಡಿಕೆಯನ್ನು ಈಡೇರಿಸಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

‘ಕೋಮು ಗಲಭೆ, ಟಿಪ್ಪು ಜಯಂತಿ ವಿವಾದ ಹಾಗೂ ಸಚಿವ ಹೆಗಡೆ ಹೇಳಿಕೆಯಿಂದಾಗಿ ರಾಜ್ಯದಲ್ಲಿ ಉಸಿರು ಕಟ್ಟುವ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ಶಾಸಕರೇ ಆಪ್ತವಾಗಿ ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿಯು ತನ್ನ ಕಾಲಿನ ಮೇಲೆ ತಾನೇ ಕಲ್ಲು ಹಾಕಿಕೊಳ್ಳುತ್ತಿದೆ’ ಎಂದಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group