ರಾಜ್ಯ ಸುದ್ದಿ

ಎಲ್ಲರೂ ಸಿದ್ದರಾಮಯ್ಯರಂತೆ ಸಾಧಕರಾಗಬೇಕು: ಹಾಡಿ ಹೊಗಳಿದ ಬಿಜೆಪಿ ಶಾಸಕ

ವರದಿಗಾರ (ಡಿ.31): ‘ಹೋರಾಟ, ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶ್ರೇಷ್ಠ ಸ್ಥಾನಕ್ಕೆ ತಲುಪಿದ್ದಾರೆ. ಎಲ್ಲರೂ ಅವರಂತೆ ಸಾಧಕರಾಗಬೇಕು’ ಎಂದು ಬಿಜೆಪಿ ಶಾಸಕ ಬಿ.ಸುರೇಶ್ ಗೌಡ, ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರ ಕಾರ್ಯ ವೈಖರಿಯನ್ನು ಪ್ರಶಂಸಿರುವ ವೀಡಿಯೋ ವೈರಲ್ ಆಗುತ್ತಿದೆ.

‘ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮಾಡಿದ ಕೆಲಸವನ್ನು ಕರ್ನಾಟಕ ರಾಜ್ಯದ ಎಲ್ಲಾ ಸಮುದಾಯದವರು ಒಪ್ಪುತ್ತಾರೆ ಎನ್ನುವುದನ್ನು ಹೆಮ್ಮೆಯಿಂದ ಹೇಳುತ್ತೇವೆ’ ಎಂದು ಅವರು ಹೆಮ್ಮೆ ಪಟ್ಟುಕೊಂಡಿದ್ದಾರೆ.

ಬಿಜೆಪಿ ಪಕ್ಷದ ಒಬ್ಬ ಶಾಸಕ ಪಕ್ಷಾತೀತನಾಗಿ ಮಾತನಾಡಿರುವುದು ಸದ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಉತ್ತಮ ಜನನಾಯಕ ಯಾವುದೇ ಪಕ್ಷದಲ್ಲಿದ್ದರೂ ಪಕ್ಷಾತೀತವಾಗಿ ಅವರನ್ನು ಸತ್ಕರಿಸುವ ಮನೋಭಾವ ಈ ಸಮಾಜದಲ್ಲಿ ವಿಜೃಂಬಿಸಬೇಕಿದೆ ಮತ್ತು ಅಭಿವೃದ್ಧಿ ಪತದಲ್ಲಿ ಆತನನ್ನು ಎಚ್ಚರಿಸುವ ಧ್ವನಿಗಳು ನಿರ್ಮಾಣವಾಗಬೇಕಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group