ರಾಜ್ಯ ಸುದ್ದಿ

ಟಿಕೆಟ್ ಗಾಗಿ ಬಿಜೆಪಿಯಲ್ಲಿ ಜಗಳ: ಬ್ಯಾನರ್ ಹರಿದು, ಕುರ್ಚಿ ಮುರಿದು ಆಕ್ರೋಶ

ವರದಿಗಾರ (ಜ.2): ತರೀಕೆರೆಯ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಒಳಜಗಳ ಪ್ರಾರಂಭವಾಗಿದ್ದು, ಮಂಗಳವಾರ ನಡೆಯುವ ಪರಿವರ್ತನಾ ಯಾತ್ರೆಗೆ ಶುಭಾಶಯ ಕೋರಿ ಹಾಕಲಾಗಿದ್ದ ಬ್ಯಾನರ್ ಹರಿಯುವ ಮೂಲಕ ಎರಡು ಗುಂಪುಗಳ ನಡುವೆ ಇದ್ದ ಭಿನ್ನಮತ ಸ್ಪೋಟಗೊಂಡಿದೆ.

ಈ ಸಂಬಂಧ ಭಾನುವಾರ ರಾತ್ರಿ ಇತ್ತಂಡಗಳ ನಡುವೆ ವಾಗ್ವಾದ ನಡೆದು ಕೈ ಕೈ ಮಿಸಲಾಯಿಸುವ ಹಂತಕ್ಕೆ ಬಂದು ತಲುಪಿತ್ತು ಎನ್ನಲಾಗಿದೆ.

ಟಿಕೆಟ್‌ ಆಕಾಂಕ್ಷಿಯಾಗಿರುವ ಎಚ್‌.ಎಂ.ಗೋಪಿಕೃಷ್ಣ ಅವರು ಕಾರ್ಯಕ್ರಮಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನರ್ ನ್ನು ಇನ್ನೊಂದು ಗುಂಪಿನವರು ಹರಿದು ಹಾಕಿದ್ದಾರೆ ಎಂಬ ವಿಷಯದಲ್ಲಿ ಎರಡು ತಂಡಗಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಸೋಮವಾರ ಮಧ್ಯಾಹ್ನ ವೇದಿಕೆ ಬಳಿ ಕಾರ್ಯಕ್ರಮಕ್ಕೆ ತಂದಿದ್ದ ಕುರ್ಚಿಗಳನ್ನು ಇನ್ನೊಂದು ಗುಂಪು ಮುರಿದು ಹಾಕಿ, ಆಕ್ರೋಶ ವ್ಯಕ್ತಪಡಿಸಿದೆ.

ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿರುವ  ಎಚ್.ಎಂ. ಗೋಪಿಕೃಷ್ಣ  ಮತ್ತು ಮಾಜಿ ಶಾಸಕ ಡಿ.ಎಸ್.ಸುರೇಶ್  ಇಬ್ಬರು ನಾಯಕರ ವೈಮನಸ್ಸು ಬಹಿರಂಗಗೊಂಡಿದ್ದು, ಮಂಗಳವಾರ ನಡೆಯುವ ಪರಿವರ್ತನಾ ಯಾತ್ರೆಯು ಸಾರ್ವಜನಿಕರಲ್ಲಿ ಈ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.

ಪೊಲೀಸರು ಮಧ್ಯ ಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group