ವರದಿಗಾರ-ಬಿಹಾರ: ಬಿಹಾರ ಹಾಗೂ ಉತ್ತರ ಪ್ರದೇಶದ ಉಭಯ ರಾಜ್ಯಗಳ 17 ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಶನಿವಾರವೂ ಮುಂದುವರಿದಿದ್ದು, ಇದುರೆಗೆ 150ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಬಂದಿದೆ. ಶುಕ್ರವಾರ ಸುರಿದ ಭಾರೀ ಮಳೆದಿಂದಾಗಿ ನದಿಗಳು ಮಿತಿ ಮೀರಿ ಹರಿಯುತ್ತಿದ್ದು, ಭರ್ತಿಯಾಗಿರುವ ಜಲಾಶಯಗಳಿಂದ ನೀರನ್ನು ನಿರಂತರವಾಗಿ ನದಿಗೆ ಹೊರಬಿಡಲಾಗುತ್ತಿದೆ.
ಬಿಹಾರದಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರೀ ಮಳೆದಿಂದ 34 ಮಂದಿ ಮೃತಪಟ್ಟಿದ್ದಾರೆ. ಹಾಗೂ ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿಯೂ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಒಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಿಹಾರ, ಉತ್ತರ ಪ್ರದೇಶದಲ್ಲಿ 1.688 ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ 1.8 ಕೋಟಿ ಜನ ಸಂಕಷ್ಟಕ್ಕೊಳಗಾಗಿದ್ದಾರೆ.
ಬಿಹಾರ ದಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ 118 ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ.
