ರಾಷ್ಟ್ರೀಯ ಸುದ್ದಿ

ದಲಿತರ ಮೇಲೆ ಹೆಚ್ಚುತ್ತಿರುವ ಹಿಂಸಾಚಾರಕ್ಕೆ ಬಿಜೆಪಿಯ ಫ್ಯಾಸಿಸ್ಟ್ ಧೋರಣೆಯೇ ಕಾರಣ: ರಾಹುಲ್ ಗಾಂಧಿ

ವರದಿಗಾರ (ಜ.3): ದಲಿತ ಸಮುದಾಯದ ಮೇಲೆ ನಿರಂತರವಾಗಿ ಹೆಚ್ಚುತ್ತಿರುವ ಹಿಂಸಾಚಾರಕ್ಕೆ ಬಿಜೆಪಿಯ ಫ್ಯಾಸಿಸ್ಟ್ ಧೋರಣೆ ಕಾರಣವಾಗಿದೆ ಎಂದು ಕಾಂಗ್ರೆಸ್ ನ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಅವರು ಭೀಮಾ-ಕೋರೆಗಾಂವ್ ಯುದ್ಧದ 200ನೇ ವರ್ಷಾಚರಣೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರತಿಕ್ರಿಯಿಸಿದ್ದಾರೆ.

ಸೋಮವಾರ ಸಂಭವಿಸಿದ ಅಂತರ್ಜಾತೀಯ ಘರ್ಷಣೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮೋದಿ ಸರಕಾರದ ದಲಿತ ವಿರೋಧಿ ನೀತಿಯ ವಿರುದ್ಧ ದಲಿತ ಪ್ರತಿರೋಧದ ಪ್ರಬಲ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ. ದಲಿತರು ಭಾರತೀಯ ಸಮಾಜದಲ್ಲಿ ಕೆಳಸ್ತರದಲ್ಲಿಯೇ ಉಳಿಯಬೇಕು ಎನ್ನುವುದು ಆರೆಸ್ಸೆಸ್-ಬಿಜೆಪಿಯ ಫ್ಯಾಸಿಸ್ಟ್ ದೃಷ್ಟಿಕೋನದ ಮುಖ್ಯ ಆಧಾರಸ್ತಂಭವಾಗಿದೆ. ಉನಾ, ರೋಹಿತ್ ವೇಮುಲಾ ಮತ್ತು ಈಗ ಭೀಮಾ-ಕೋರೆಗಾಂವ್ ಇವೆಲ್ಲ ದಲಿತ ಪ್ರತಿರೋಧದ ಪ್ರಬಲ ಸಂಕೇತಗಳಾಗಿವೆ ಎಂದು ರಾಹುಲ್ ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group