ರಾಜ್ಯ ಸುದ್ದಿ

ಹಿಂದೂ ಧರ್ಮವನ್ನು ಬಿಜೆಪಿಗರು ಗುತ್ತಿಗೆ ಪಡೆದುಕೊಂಡಿದ್ದಾರ?: ಸಿದ್ದರಾಮಯ್ಯ ಪ್ರಶ್ನೆ

ವರದಿಗಾರ (ಜ.6):  ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರಾವಳಿಯಲ್ಲಿ ಬಿಜೆಪಿಗರು ಆತಂಕವನ್ನು ಸೃಷ್ಟಿಸುತ್ತಿದ್ದಾರೆ. ಹಿಂದೂ ಧರ್ಮವನ್ನು ಬಿಜೆಪಿಗರು ಗುತ್ತಿಗೆ ಪಡೆದುಕೊಂಡಿದ್ದಾರ? ನಾವೆಲ್ಲ ಹಿಂದೂಗಳಲ್ವಾ ಎಂದು ಬಿಜೆಪಿಯನ್ನು ಅವರು ಪ್ರಶ್ನಿಸಿದ್ದಾರೆ.

ಅವರು ಮೂಡಿಗೆರೆಯಲ್ಲಿ ವರದಿಗಾರರೊಂದಿಗೆ ಮಾತನಾಡುತ್ತಾ, ‘ಬಿಜೆಪಿಯವರು ಹಿಂದೂ ಯುವಕ ಸಾವನ್ನಪ್ಪಿದ್ದಾರೆ ಎಂದು ಕರಾವಳಿಯಲ್ಲಿ ಗಲಾಟೆ ಮಾಡಿದ್ದಾರೆ’ . ‘ಕರಾವಳಿಯಲ್ಲಿ ಯುವಕ ಕೊಲೆಯಾಗಿರುವುದಕ್ಕೆ ಸರಕಾರಕ್ಕೆ ಅನುಕಂಪವಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನ ಕ್ರಮ ಜರುಗಿಸುತ್ತೇವೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ, ಪರಿಹಾರ ನೀಡುವ ಕೆಲಸ ಮಾಡಿದ್ದೇವೆ ಎಂದಿದ್ದಾರೆ.

ಧರ್ಮದ ಹೆಸರಿನಲ್ಲಿ ಕೋಮುಭಾವನೆ ಕೆರಳಿಸುವ, ಗಲಭೆ ಸೃಷ್ಟಿಸುವ ಸಂಘಟನೆಗಳ ವಿರುದ್ಧ ಉಗ್ರ ಕ್ರಮ ಜರುಗಿಸುತ್ತೇವೆ. ಕೋಮುವಾದಿ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಈ ಸಂದರ್ಭ ಸ್ಪಷ್ಟಪಡಿಸಿದ್ದಾರೆ. ಸಂಘಟನೆ ನಿಷೇಧಿಸುವುದೂ ಒಂದು ಕ್ರಮ. ನಿಷೇಧಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ ಎಂದು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group