ವರದಿಗಾರ (ಜ.8): ‘ನಾವು ಹಿಂದೂಗಳು ಅದರಲ್ಲೂ ಮನುಷ್ಯತ್ವವಿರುವ ಹಿಂದೂಗಳು. ಗೋಡ್ಸೆ ಆರಾಧಕರು ನಮಗೆ ಹಿಂದುತ್ವದ ಪಾಠ ಮಾಡುವ ಅಗತ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಅವರು ಇಂದು ಉಡುಪಿಯಲ್ಲಿ ನಡೆಯಲಿರುವ ಸಾಧನ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೈಂದೂರಿಗೆ ಆಗಮಿಸಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಮನುಷ್ಯರೇ ಅಲ್ಲದ ಬಿಜೆಪಿ ನಾಯಕರಿಂದ ಹಿಂದುತ್ವದ ಪಾಠ ಕಲಿಯಬೇಕಿಲ್ಲ. ಕೋಮುಗಲಭೆಗಳಿಗೆ ಸಂಘಪರಿವಾರದ ಸಂಘಟನೆಗಳೇ ಕಾರಣ ಎಂದು ಹೇಳಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಠಿಸುವ ಮತೀಯ ಸಂಘಟನೆಗಳ ಮೇಲೆ ನಿಗಾ ಇಡಲು ಸೂಚಿಸಿರುವುದಾಗಿ ಅವರು ಹೇಳಿದ್ದಾರೆ.
