ರಾಜ್ಯ ಸುದ್ದಿ

‘ದೀಪಕ್ ಹತ್ಯೆಗೆ ಬಿಜೆಪಿ ಕಾರ್ಪೋರೇಟರ್ ಸುಪಾರಿ’ ಕುಮಾರಸ್ವಾಮಿ ಹೇಳಿಕೆ; ಕುಮಾರಸ್ವಾಮಿಯೊಂದಿಗೆ ಮಾಹಿತಿಯಿದ್ದರೆ ತನಿಖಾಧಿಕಾರಿಗೆ ನೀಡಲಿ: ಸಿದ್ದರಾಮಯ್ಯ

ವರದಿಗಾರ (ಜ.9): ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳದಲ್ಲಿ ಜನವರಿ 03ರಂದು ದುಷ್ಕರ್ಮಿಗಳು ದೀಪಕ್ ರಾವ್ ಎಂಬ ಯುವಕನನ್ನು ಹಾಡಹಗಲೇ ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನಿನ್ನೆ ಮೈಸೂರಿನಲ್ಲಿ ಹೇಳಿಕೆ ನೀಡಿದ್ದ ‘ದೀಪಕ್ ರಾವ್ ಹತ್ಯೆಗೆ ಸ್ಥಳೀಯ ಬಿಜೆಪಿ ಕಾರ್ಪೋರೇಟರ್ ಸುಪಾರಿ ನೀಡಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ’ ಎಂದು ಹೇಳಿದ್ದರು . ಈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಕುಮಾರಸ್ವಾಮಿಯೊಂದಿಗೆ ಮಾಹಿತಿಯಿದ್ದರೆ ತನಿಖಾಧಿಕಾರಿಗೆ ನೀಡಲಿ’ ಎಂದು ಹೇಳಿದ್ದಾರೆ.

ಅವರು ಮಡಿಕೇರಿಯಲ್ಲಿ ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋಮುಪ್ರಚೋದನೆ ಮಾಡಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವವರು ಯಾರೇ ಆದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು  ಅವರು ಸ್ಪಷ್ಟಪಡಿಸಿದ್ದಾರೆ.

ಚುನಾವಣೆ ಪೂರ್ವ ಹಾಗೂ ಚುನಾವಣೆ ಬಳಿಕ ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದೂ ಇದೇ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group