ರಾಜ್ಯ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಸಂಘಪರಿವಾರದ ಅನೈತಿಕ ಪೋಲಿಸ್ ಗಿರಿ

ವರದಿಗಾರ (ಜ.9): ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಕಾಲೇಜ್ ಯುವತಿಯೊಬ್ಬಳಿಗೆ ಪೊಲೀಸರ ಮುಂದೆ ಸಂಘಪರಿವಾರಕ್ಕೆ ಸೇರಿದ ಯುವಕರು ಹಲ್ಲೆ ನಡೆಸಿದ ಘಟನೆ ಚರ್ಚೆಯಲ್ಲಿರುವಾಗಲೇ ಮತ್ತೊಂದು ಅನೈತಿಕ ಪೊಲೀಸ್ ಗಿರಿ ನಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಿಂದ ವರದಿಯಾಗಿದೆ.

ಬಂಟ್ವಾಳದ ಹೊರವಲಯದಲ್ಲಿ ಹಿಂದೂಪರ ಸಂಘಟನೆಗೆ ಸೇರಿದ ನಾಲ್ಕು ದುಷ್ಕರ್ಮಿಗಳ ತಂಡ ದಲಿತ ಸಮುದಾಯಕ್ಕೆ ಸೇರಿದ ಮಹಿಳೆಗೆ ಬೆದರಿಕೆಯೊಡ್ಡಿದ್ದು, ‘ಮುಸ್ಲಿಂ ಸಮುದಾಯಕ್ಕೆ ಸೇರಿದ ಯವಕರೊಂದಿಗೆ ಓಡಾಡಬೇಡಿ’ ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಹಿಂದೂಪರ ಸಂಘಟನೆಯ ಮುಖಂಡರಾದ, ಸ್ಥಳೀಯ ಹೋಟೆಲ್ ಮಾಲಕ ರಮೇಶ್, ಆಟೋ ರಿಕ್ಷಾ ಚಾಲಕ ಉಮೇಶ್ ರನ್ನು ಬಂಧಿಸಿದ್ದಾರೆ. ಉಮೇಶ್ ಸಹೋದರ ರಾಜೇಶ್ ಮತ್ತು ಆತನ ಸ್ನೇಹಿತ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಮೀಪದ ಮೂಡಿಗೆರೆಯಲ್ಲಿ ಕಾಲೇಜ್ ವಿದ್ಯಾರ್ಥಿ ಧನ್ಯಶ್ರೀ ಸಂಘಪರಿವಾರದ ಅನೈತಿಕ ಪೊಲೀಸ್ ಗಿರಿಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯಾದ್ಯಂತ ಚರ್ಚೆಯಲ್ಲಿರುವಾಗಲೇ ಮತ್ತೊಂದು ಘಟನೆ ನಡೆದಿರುವುದು ವಿಪರ್ಯಾಸ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group