ವರದಿಗಾರ (ಜ.11): ಇತ್ತೀಚೆಗೆ ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ‘ಸಂಘಪರಿವಾರದ ಗೂಂಡಾಗಿರಿ’ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆ ತೀವ್ರಗೊಳಿಸಲಾಗಿದ್ದು, ಧನ್ಯಶ್ರೀ ತಂದೆ ಯಾದವ ಸುವರ್ಣ ಅವರಿಗೆ ಕೆಲವರು ಪೊಲೀಸರಿಗೆ ತಪ್ಪು ಮಾಹಿತಿ ನೀಡುವಂತೆ ಒತ್ತಡ ಹೇರಿರುವುದು ತಿಳಿದು ಬಂದಿದ್ದು, ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಹೇಳಿದ್ದಾರೆ.
ನಿನ್ನೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಅವರು ಮಾತನಾಡುತ್ತಿದ್ದರು.
‘ತಪ್ಪು ಮಾಹಿತಿ ನೀಡುವಂತೆ ಮಾಡಿದ ಕೆಲ ಸಂಘಟನೆಗಳ ಯುವಕರನ್ನು ಗುರುತಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಹೇಳಿದ್ದಾರೆ.
ಸುಳ್ಳು ಮಾಹಿತಿಯನ್ನು ನೀಡಿ ತನಿಖೆಯ ದಾರಿ ತಪ್ಪಿಸಲು ಪ್ರಯತ್ನಿಸಿದ ಸಾಕ್ಷ್ಯಗಳು ಇದೀಗಾಗಲೇ ಲಭ್ಯವಾಗಿವೆ ಎಂದು ತಿಳಿಸಿದ್ದಾರೆ.
