ರಾಜ್ಯ ಸುದ್ದಿ

ಸಿದ್ದರಾಮಯ್ಯನನ್ನು ಜೈಲಿಗೆ ಕಳುಹಿಸದಿದ್ದರೆ ನಾ ಯಡಿಯೂರಪ್ಪನಲ್ಲ, ಮೊದಲು ನೀವು ತಪ್ಪಿಸಿಕೊಳ್ಳಿ ಎಂದ ಸಿದ್ದರಾಮಯ್ಯ

ವರದಿಗಾರ-ಬೆಂಗಳೂರು: ನಗರದಲ್ಲಿ ಶುಕ್ರವಾರ ಬಿಜೆಪಿ ವತಿಯಿಂದ ‘ಅಕ್ರಮ ಆಸ್ತಿ ಸಂಪಾದಿಸಿ, ಆದಾಯ ತೆರಿಗೆ ಅಧಿಕಾರಿಗಳ ದಾಳಿಗೆ ಗುರಿಯಾದ ಸಚಿವರಾದ ಡಿ.ಕೆ.ಶಿವಕುಮಾರ್‌ ಹಾಗೂ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಾತನಾಡುತ್ತಾ  ‘ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ, ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸುತ್ತೇನೆ. ಒಂದು ವೇಳೆ ಸಿದ್ಧರಾಮಯ್ಯರನ್ನು ಜೈಲಿಗೆ ಕಳುಹಿಸದೇ ಇದ್ದರೆ ನನ್ನ ಹೆಸರು ಯಡಿಯೂರಪ್ಪನೇ ಅಲ್ಲ’ ಎಂದು ಮುಖ್ಯಮಂತ್ರಿಗೆ ಸವಾಲು ಹಾಕಿದ್ದಾರೆ.

ಮಾತು ಮುಂದುವರಿಸುತ್ತಾ, ಸ್ವಾತಂತ್ರ್ಯದ ಬಳಿಕ ರಾಜ್ಯ ಕಂಡ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯವೆಂದು ಹೇಳಿದರು . ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುತ್ತದೆ ಎಂದು ಅವರು ಸಚಿವರನ್ನು ಸಂಪುಟದಿಂದ ಕೈಬಿಡುತ್ತಿಲ್ಲ ಹಾಗೂ ಸಚಿವರ ಅಕ್ರಮಗಳಿಗೆ ಮುಖ್ಯಮಂತ್ರಿಯೇ ಕುಮ್ಮಕ್ಕು ನೀಡುತ್ತಿದ್ದಾರೆ. ನಗರದಲ್ಲಿ ಮಳೆ ಬಂದು ಜನ ಸಾಯುತ್ತಿದ್ದರೆ, ಮುಖ್ಯಮಂತ್ರಿ ಮಾತ್ರ ಸಚಿವ ಸಂಪುಟ ವಿಸ್ತರಣೆ ಎಂದು ಮೋಜು ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಹೇಳಿಕೆಯ ವಿರುದ್ಧ ಪ್ರತಿಕ್ರಿಸಿರುವ ಸಿ.ಎಂ ಸಿದ್ಧರಾಮಯ್ಯ,  ನನ್ನನ್ನು ಜೈಲಿಗೆ ಕಳುಹಿಸುವುದು ಇರಲಿ, ತಾವು ಈಗ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲಿ’ ಎಂದು ಕಿವಿ ಮಾತು ನೀಡಿದ್ದಾರೆ. ಭ್ರಷ್ಟಾಚಾರದಲ್ಲಿ ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದುವುದರಿಂದ ಹತಾಶೆಯಿಂದ ವಿನಾಕಾರಣ ಆರೋಪಿಸುತ್ತಿದ್ದಾರೆ. ನಾನು ಯಾವುದಾದರೂ ಅಕ್ರಮದಲ್ಲಿ ಭಾಗಿಯಾಗಿದ್ದ ದಾಖಲೆಯನ್ನು ತೋರ್ಪಡಿಸಲಿ ಎಂದು ತಿರುಗಿ ಸವಾಲು ಹಾಕಿದ್ದರೆ. ಅವರು ಜೈಲಿಗೆ ಹೋಗಿ ಬಂದಿರುವುದರಿಂದ ಅವರಿಗೆ ಸದಾ ಅದೇ ಧ್ಯಾನವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

 

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group