ವರದಿಗಾರ (ಜ.11): ‘ಬಿಜೆಪಿ, ಆರೆಸ್ಸೆಸ್, ಬಜರಂಗದಳದವರು ಉಗ್ರಗಾಮಿಗಳು’ ಎಂಬ ಹೇಳಿಕೆಯನ್ನು ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಹೇಳಿಕೆಯನ್ನು ಇಂದು ಸಮರ್ಥಿಸಿಕೊಂಡಿದ್ದು, ಉಗ್ರ ಚಟುವಟಿಕೆಯಲ್ಲಿ ತೊಡಗುವವರು ಉಗ್ರರಲ್ಲದೆ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.
ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ತನ್ನ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಯ ಸಂದರ್ಭ ಸಮರ್ಥಿಸಿಕೊಂಡಿದ್ದಾರೆ.
ಕೋಮು ಭಾವನೆ ಕೆರಳಿಸುವ ಮೂಲಕ ಮತಗಳ ಧ್ರುವೀಕರಣಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ.
ಸಾವಿನ ಮನೆಯಲ್ಲಿ ರಾಜಕಾರಣ ಮಾಡುತ್ತಿರುವವರು ಯಾರು? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಶವದ ಮೇಲೆ ರಾಜಕೀಯ ಮಾಡುವವರನ್ನು ಏನನ್ನಬೇಕು ಎಂದು ಹೇಳಿದ್ದಾರೆ.
