ರಾಜ್ಯ ಸುದ್ದಿ

ಬಜರಂಗದಳದ ಹೆಸರನ್ನು ಬಲವಂತವಾಗಿ ಸೇರಿಸಲಾಗಿದೆ; ಧನ್ಯಶ್ರೀ ಆತ್ಮಹತ್ಯೆಯ ಆರೋಪಿಗಳ ಪರ ನಿಂತ ಶೋಭಾ ಕರಂದ್ಲಾಜೆ

ವರದಿಗಾರ (ಜ.11): ಜನವರಿ 06 ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ‘ಸಂಘಪರಿವಾರದ ಗೂಂಡಾಗಿರಿ’ಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಧನ್ಯಶ್ರೀ ಆರೋಪಿಗಳ ಪರ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಬ್ಯಾಟಿಂಗ್ ಮಾಡಿದ್ದಾರೆ.

ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ, ಬಜರಂಗದಳದ ಹೆಸರನ್ನು ಬಲವಂತವಾಗಿ ಸೇರಿಸಲಾಗಿದೆ. ಯುವತಿ ಮನೆಗೆ ಸಾಂತ್ವಾನ ಹೇಳಲು ಹೋದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮೇಲ್ನೋಟಕ್ಕೆ ಪ್ರಕರಣವನ್ನು ಮುಂದಿಟ್ಟು ಸರಕಾರ ರಾಜಕೀಯ ಮಾಡುತ್ತಿದೆ. ಸರಕಾರ ರಾಜಕೀಯ ಮಾಡುವುದನ್ನು ನಿಲ್ಲಿಸಲಿ ಎಂದು ಹೇಳಿದ್ದಾರೆ.

ಡೆತ್ ನೋಟ್ ನಲ್ಲಿ ಯಾರ ಹೆಸರನ್ನೂ ನಮೂದಿಸಿಲ್ಲ. ಈ ಬಗ್ಗೆ ಎಸ್ಪಿ ಅಣ್ಣಾಮಲೈ ಯವರೊಂದಿಗೆ ಚರ್ಚಿಸಿದ್ದೇನೆ. ಎಸ್ಪಿ ಯವರಲ್ಲಿ ನಮಗೆ ಸಂಪೂರ್ಣ ನಂಬಿಕೆಯಿದೆ ಎಂದು ಹೇಳಿದ್ದಾರೆ.

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಆದರೆ ಯಾವುದೇ ತಪ್ಪು ಮಾಡದೇ ಇರುವವರಿಗೆ ಶಿಕ್ಷೆ ಬೇಡ. ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ  ಬಂಟ್ವಾಳ ಮೂಲದ ಸಂತೋಷ್ ನನ್ನು ಬಂಧಿಸಲಾಗಿದ್ದು, ವಿಚಾರಣೆಗೊಳಪಡಿಸಲಾಗಿದೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group