ವರದಿಗಾರ (ಜ.13): ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರ ಸಚಿವರೊಬ್ಬರು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಾರೆ. ಈ ನೆಲದ ಕಾನೂನನ್ನು ಕಂಡರೆ ಬಿಜೆಪಿ ನಾಯಕರಿಗೆ ಆಗಿ ಬರುವುದಿಲ್ಲ. ಬಿಜೆಪಿಗರು ಹಿಂದುತ್ವದ ಹೆಸರಿನಲ್ಲಿ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಶುಕ್ರವಾರ ಮಳವಳ್ಳಿಯ ಕನಕದಾಸ ಕ್ರೀಡಾಂಗಣದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡುತ್ತಾ, ‘ಭಾರತ ಸಂವಿಧಾನ ಇಡೀ ಜಗತ್ತಿನಲ್ಲೇ ಶ್ರೇಷ್ಠವಾದುದು. ಇದನ್ನು ಬದಲಾವಣೆ ಮಾಡುವ ಬಗ್ಗೆ ಮಾತನಾಡಿದರೆ ಯಾರೂ ಸಹಿಸುವುದಿಲ್ಲ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ಸಮಾನತೆ, ಸಾಮಾಜಿಕ ನ್ಯಾಯದ ಅರ್ಥವನ್ನೇ ಅರಿಯದ ಬಿಜೆಪಿಯವರು ಭಾರತ ಸಂವಿಧಾನವನ್ನು ಮುಟ್ಟಿದರೆ ಇಡೀ ದೇಶದ ಜನರು ದಂಗೆ ಏಳುತ್ತಾರೆ’ ಎಂದು ಹೇಳಿದ್ದಾರೆ
