ರಾಜ್ಯ ಸುದ್ದಿ

ಸಂವಿಧಾನ ಬದಲಿಸಲು ಅನಂತ್ ಕುಮಾರ್ ಹೆಗಡೆಯೇನು ದೊಣ್ಣೆ ನಾಯಕರೇ?-ಪ್ರಕಾಶ್ ರೈ ಪ್ರಶ್ನೆ

ವರದಿಗಾರ (ಜ.14): ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕ್ರಿಕೆಟ್ ಆಡಲು ಹೋಗಿ ಫುಟ್‌ಬಾಲ್ ಆಡುತ್ತಿದ್ದಾರೆ. ಈ ಪ್ರಯತ್ನದಲ್ಲಿ ಅವರ ಮುಖವೇ ಒಡೆಯುವ ಸಾಧ್ಯತೆಯೇ ಹೆಚ್ಚು ಎಂದು ಬಹುಭಾಷಾ ನಟ ಪ್ರಕಾಶ್ ರೈ ವ್ಯಂಗ್ಯವಾಡಿದ್ದಾರೆ.

ಅವರು ಶಿರಸಿಯ ರಾಘವೇಂದ್ರ ಮಠದಲ್ಲಿ ‘ಪ್ರೀತಿ ಪದಗಳ ಪಯಣ’ ಆಯೋಜನಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ‘ನಮ್ಮ ಸಂವಿಧಾನ ನಮ್ಮ ಹೆಮ್ಮ’ ರಾಜ್ಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಅನಂತ್ ಕುಮಾರ್ ಹೆಗಡೆಗೆ ಸಂವಿಧಾನದ ಮೂಲ ಆಶಯವೇ ಗೊತ್ತಿಲ್ಲ. ಸಂವಿಧಾನ ಬದಲಿಸಲು ಇವರೇನು ದೊಣ್ಣೆ ನಾಯಕರೇ? ಎಂದು ಇದೇ ಸಂದರ್ಭದಲ್ಲಿ ಪ್ರಕಾಶ್ ರೈ ಪ್ರಶ್ನಿಸಿದ್ದಾರೆ.

ಇವರು ನಿಜವಾದ ಹಿಂದೂಗಳೇ? ಎಂದು ಪ್ರಶ್ನಿಸುತ್ತಾ, ‘ಇವರ ಬಣ್ಣ ಬೇರೆಯೇ ಇದೆ’ ಎಂದು ಅವರು ಹೇಳಿದ್ದಾರೆ.

 

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group