ವರದಿಗಾರ (ಜ.23): ದೇಶದಲ್ಲಿ ಪೇಶ್ವೆ ರೀತಿಯ ಆಡಳಿತ ನಡೆಯುತ್ತಿದ್ದು, ಗಾಂಧೀಜಿ ನಾಡಲ್ಲಿ ಗೋಡ್ಸೆ ಹೀರೋ ಆಗುತ್ತಿದ್ದಾನೆ ಎಂದು ಸಾಹಿತಿ ದೇವನೂರು ಮಹಾದೇವ್ ಹೇಳಿದ್ದಾರೆ
ದಾವಣಗೆರೆಯ ಸ್ವರಾಜ್ ಇಂಡಿಯಾ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ನಡೆದುಕೊಂಡಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸಿಲ್ಲ. ಇದರಿಂದ ಯುವಕರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಯವರು ವಚನ ಭ್ರಷ್ಟರಾಗಿದ್ದಾರೆ. ಕಾಂಗ್ರೆಸ್ ಪಕ್ಷದವರು ಇದಕ್ಕೇನೂ ಹೊರತಾಗಿಲ್ಲ ಎಂದೂ ಹೇಳಿದ್ದಾರೆ. ಅವರು ಭರವಸೆ ನೀಡುತ್ತಾರೆ ಆದರೆ ಜಾರಿಗೆ ತರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾ,ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿದೆ ಎಂದು ಹೇಳಿದ್ದಾರೆ.
