ರಾಜ್ಯ ಸುದ್ದಿ

ಅನಂತ್ ಕುಮಾರ್ ಹೆಗಡೆ ಹುಚ್ಚು ನಾಯಿಗಿಂತ ಕಡೆ: ಪ್ರೊ.ಕೆ.ಎಸ್. ಭಗವಾನ್

ವರದಿಗಾರ (ಜ.24): ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯ ಸಂವಿಧಾನ ವಿರೋಧಿ ಮತ್ತು ಜಾತ್ಯಾತೀತ ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ನಾಯಿಗಳಿಗೆ ಹೋಲಿಸಿದ ಬಗ್ಗೆ ಪ್ರತಿಕ್ರಿಯಿಸಿರುವ ಖ್ಯಾತ ಸಾಹಿತಿ ಪ್ರೊ.ಕೆ.ಎಸ್. ಭಗವಾನ್, ಅನಂತ್ ಕುಮಾರ್ ಹೆಗಡೆ ಹುಚ್ಚು ನಾಯಿಗಿಂತ ಕಡೆ ಎಂದು ಹೇಳಿದ್ದು, ಆ ಹುಚ್ಚು ನಾಯಿಯನ್ನು ಕಂಡರೆ ಹೋರಾಟಗಾರರು ಸೆದೆ ಬಡೆಯಿರಿ ಎಂದು ಕರೆ ನೀಡಿದ್ದಾರೆ.

ಅವರು ಮೈಸೂರಿನ ಪತ್ರಕರ್ತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಂವಿಧಾನದ ಬಗ್ಗೆ ತುಚ್ಚವಾಗಿ ಮಾತನಾಡಿ ಕ್ಷಮೆ ಯಾಚಿಸಿದ್ದರೂ ಹುಚ್ಚುಚ್ಚಾಗಿ ಮಾತನಾಡುತ್ತಿರುವುದನ್ನು ನೋಡಿದರೆ ಅವರಿಗೆ ಹುಚ್ಚು ಹೆಚ್ಚಾದಂತೆ ಕಾಣುತ್ತದೆ ಎಂದು ಪ್ರೊ.ಕೆ.ಎಸ್. ಭಗವಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ಬದಲಿಸಬೇಕು ಎಂಬ ಇಚ್ಛೆ ಅವರಿಗೆ ಇದ್ದರೆ ಕೇಂದ್ರ ಸರಕಾರವನ್ನು ವಿಸರ್ಜಿಸಲಿ ಎಂದು ಹೇಳಿದ್ದಾರೆ. ಆ ಬಳಿಕ ಸಂವಿಧಾನ ಬದಲಾಯಿಸಬೇಕೆಂದು ಸಂಘಟನೆ ಮಾಡಿ ಚುನಾವಣೆಗೆ ಸ್ಪರ್ಧಿಸಲಿ. ಜನತೆ ಒಪ್ಪಿಗೆ ಸೂಚಿಸಿದರೆ ಬದಲಾಯಿಸಲಿ. ಇಲ್ಲದಿದ್ದರೆ ತೆಪ್ಪಗೆ ಮನೆಯಲ್ಲಿ ಕುಳಿತುಕೊಳ್ಳಲಿ ಎಂದು ಪ್ರೊ.ಕೆ.ಎಸ್. ಭಗವಾನ್ ಸಲಹೆ ನೀಡಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group