ರಾಷ್ಟ್ರೀಯ ಸುದ್ದಿ

ನ್ಯಾಯಕ್ಕಾಗಿ ಆಗ್ರಹಿಸಿ ಪ್ರಧಾನಿ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಗೆ ರಕ್ತದಲ್ಲಿ ಪತ್ರ ಬರೆದ ಅತ್ಯಾಚಾರ ಸಂತ್ರಸ್ತೆ !!

ವರದಿಗಾರ (ಜ 24 ) : ಉತ್ತರ ಪ್ರದೇಶದ ಅತ್ಯಾಚಾರ ಸಂತ್ರಸ್ತೆಯೋರ್ವಳು ತನಗೆ ಮರೀಚಿಕೆಯಾಗಿರುವ ನ್ಯಾಯದ ಕುರಿತು ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ತನ್ನದೇ ರಕ್ತದಲ್ಲಿ ಪತ್ರ ಬರೆದಿದ್ದು, ನನ್ನ ಈ ಸ್ಥಿತಿಗೆ ಕಾರಣಕರ್ತರಾದವರ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದ್ದಾಳೆ. “ಪೊಲೀಸರು ಆರೋಪಿಗಳ ಪ್ರಭಾವಿ ಹಿನ್ನೆಲೆಗಳಿಂದಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ, ಇದೇ ವೇಳೆ ಆರೋಪಿಗಳು ದೂರು ವಾಪಾಸ್ ಪಡೆಯುವಂತೆ ನನ್ನ ಮೇಲೆ ಒತ್ತಡ ತರುತ್ತಿದ್ದಾರೆ. ನನಗೆ ನ್ಯಾಯ ಬೇಕು, ಇಲ್ಲದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಅತ್ಯಾಚಾರ ಸಂತ್ರಸ್ತೆ ಜನವರಿ 20ರಂದು ರಕ್ತದಲ್ಲಿ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾಳೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಎಸ್ಪಿ ಶಶಿ ಶೇಖರ್ ಸಿಂಗ್, ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಬಾರಾಬಂಕಿ ಪೊಲೀಸ್ ಠಾಣೆಯಲ್ಲಿ ಮಾರ್ಚ್ 24, 2017 ರಂದು ದಿವ್ಯಾ ಪಾಂಡೆ ಮತ್ತು ಅಂಕಿತ್ ವರ್ಮಾ ಎನ್ನುವವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಸಂತ್ರಸ್ತೆಯು ಎಂಜಿನಿಯರ್ ವಿದ್ಯಾರ್ಥಿನಿಯಾಗಿದ್ದು, ಅತ್ಯಾಚಾರ ನಡೆಸಿದ ಆರೋಪಿಗಳು ಅವಳಿಗೆ ದೂರು ವಾಪಾಸ್ ಪಡೆಯುವಂತೆ ಬೆದರಿಕೆ ಹಾಕುತ್ತಿದ್ದಾರೆಂದು ಆಕೆಯ ತಂದೆ ಆರೋಪಿಸಿದ್ದಾರೆ.

2017 ಅಕ್ಟೋಬರ್ ನಲ್ಲಿ ರಾಯ್ ಬರೇಲಿ ಪೊಲೀಸ್ ಠಾಣೆಯಲ್ಲಿ ಅನಾಧೇಯ ವ್ಯಕ್ತಿಗಳ ಮೇಲೆ ಮತ್ತೊಂದು ಎಫ್ ಐ ಆರ್ ದಾಖಲಿಸಲಾಗಿದ್ದು, ಇದೇ ಸಂತ್ರಸ್ತ ಬಾಲಕಿಯ ಹೆಸರಿನಲಿ ಫೇಸ್ಬುಕ್ ಖಾತೆಯೊಂದನ್ನು ತೆರೆದು, ಅದರಲ್ಲಿ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಲಾಗಿರುವ ಕುರಿತು ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಶೇಖರ್ ಸಿಂಗ್ ಹೇಳುತ್ತಾರೆ. ಆದರೆ ಅತ್ಯಾಚಾರ ಸಂತ್ರಸ್ತೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಬರೆದಿರುವ ಪತ್ರದ ಕುರಿತು ತನಗೇನೂ ತಿಳಿದಿಲ್ಲವೆಂದು ಸಿಂಗ್ ಹೇಳಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group