ಜಿಲ್ಲಾ ಸುದ್ದಿ

ಜಗದೀಶ್ ಶೇಣವನ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲು ಎಸ್ ಡಿ ಪಿ ಐ ಆಗ್ರಹ

ವರದಿಗಾರ (ಜ 28) : ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಪುರಭವನದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಇತ್ತೀಚೆಗೆ ಸಂಘಪರಿವಾರದ ಗೂಂಡಾಗಳಿಂದ ಹತ್ಯೆಯಾದ ಬಶೀರ್ ರವರ ಹತ್ಯೆ ಪ್ರತೀಕಾರದ ಕೊಲೆ ಇದರಲ್ಲಿ ನಮಗೇನು ಚಿಂತೆಯಿಲ್ಲ ಕೊಲೆ ಮಾಡಿದವರನ್ನು ನಾವು ಬೆಂಬಲಿಸಬೇಕು ,ಈ ಬಗ್ಗೆ ನನ್ನ ಮೇಲೆ ದೂರು ದಾಖಲಾದರು ಅದನ್ನೆಲ್ಲಾ ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿಕೆ ಕೊಟ್ಟಿದ್ದು ಇದು ಕಾನೂನನ್ನು ಮೀರಿದ ಸಂವಿಧಾನ ವಿರೋಧಿ ಹೇಳಿಕೆಯಾಗಿದ್ದು ಇದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI)ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ಇವರ ಕೊಲೆಗಡುಕರ ಪರವಾಗಿರುವ ಹೇಳಿಕೆಯಿಂದ ಹತ್ಯೆಯ ಹಿಂದೆ ಯಾರಿದ್ದಾರೆ ಎಂಬುದು ಸ್ಪಷ್ಟವಾಗಿ ಗೊತ್ತುಪಡಿಸಿದ್ದಾರೆ. ಇದು ದೀಪಕ್ ರಾವ್ ಹತ್ಯೆಯಲ್ಲಿ ಬಿಜೆಪಿಯ ಕೈವಾಡದ ಬಗ್ಗೆ ಆರೋಪಗಳ ತನಿಖೆ ನಡೆಸುತ್ತಿರುವಾಗ ತನಿಖೆಯ ದಿಕ್ಕನ್ನು ಬದಲಾಯಿಸಲು ಪ್ರಯತ್ನದ ಭಾಗವಾಗಿದೆ.

ಬಶೀರ್ ಹತ್ಯೆಯ ಹಿಂದೆ ಜಗದೀಶ್ ಶೇಣವರ ಕೈವಾಡ ಎದ್ದು ಕಾಣುತ್ತಿದ್ದು ಇವರ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಎಸ್ಡಿಪಿಐ ಒತ್ತಾಯಿಸುತ್ತದೆ.
ಇಂತಹ ಹೇಳಿಕೆ ಜಿಲ್ಲೆಯ ಶಾಂತಿಯನ್ನು ಕೆಡವಿ ಗಲಭೆಯನ್ನು ಸೃಷ್ಟಿಸುವ ಹುನ್ನಾರವಾಗಿದೆ.
ಆದುದರಿಂದ ಸರಕಾರ ಮತ್ತು ಪೊಲೀಸ್ ಇಲಾಖೆ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಎಸ್ಡಿಪಿಐ ದ.ಕ ಜಿಲ್ಲಾ ಅಧ್ಯಕ್ಷ ಹನೀಫ್ ಖಾನ್ ಕೊಡಾಜೆ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group