ವರದಿಗಾರ (ಫೆ 2) : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಭೆಯು ದಿನಾಂಕ 31.1.2018ರಂದು ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾಗಿದ್ದ ಹನೀಫ್ ಖಾನ್ ಕೊಡಾಜೆಯವರ ವೈಯುಕ್ತಿಕ ಕಾರಣಗಳನ್ನು ಪರಿಗಣಿಸಿ ರಾಜ್ಯ ಸಮಿತಿಯು ಅವರನ್ನು ಹುದ್ದೆಯಿಂದ ತೆರವುಗೊಳಿಸಿ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಥಾವುಲ್ಲಾ ಜೋಕಟ್ಟೆಯವರನ್ನು ಮುಂದಿನ ಆಂತರಿಕ ಚುನಾವಣೆಯ ಅವಧಿಯ ವರೆಗೆ ನೂತನ ಜಿಲ್ಲಾಧ್ಯಕ್ಷರಾಗಿ ರಾಜ್ಯ ಸಮಿತಿಯು ನೇಮಕ ಮಾಡಿರುತ್ತದೆ ಹಾಗೂ ಇದೇ ಸಂದರ್ಭದಲ್ಲಿ ತೆರವುಗೊಂಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಇಕ್ಬಾಲ್ ಬೆಳ್ಳಾರೆಯವರನ್ನು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇದೇ ಸಂದರ್ಭದಲ್ಲಿ ಸಭೆಯು ಮುಂಬರುವ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಲಾಯಿತು. ಕೇಂದ್ರ ಸಮಿತಿಯ ಸೂಚನೆಯಂತೆ ಜಿಲ್ಲಾದ್ಯಂತ ತ್ರಿವಳಿ ತಲಾಖ್ ಬಿಲ್ ವಿರುದ್ಧ ಅಭಿಯಾನವನ್ನು ನಡೆಸುವಂತೆ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕರಪತ್ರ ವಿತರಣೆ, ಪೋಸ್ಟರ್ ಅಭಿಯಾನ ಮತ್ತು ಪ್ರತಿಭಟನಾ ಸಭೆಗಳನ್ನು ನಡೆಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾ ಸಮಿತಿ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಲತೀಫ್ ರವರು ಹಾಗೂ ಜಿಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು ಎಂದು ಪಕ್ಷದ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾದ ಅಶ್ರಫ್ ಮಂಚಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
