ರಾಜ್ಯ ಸುದ್ದಿ

ನರೇಂದ್ರ ಮೋದಿ ದೇಶದ ಪ್ರಧಾನಿಯಾಗಲು ಅರ್ಹರಲ್ಲ: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ವರದಿಗಾರ (ಫೆ.10): ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ‘ಪರಿವರ್ತನಾ ಯಾತ್ರೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರಕಾರದ ವಿರುದ್ಧ ತೀವ್ರ ತರಹದ ವಾಗ್ದಾಳಿ ನಡೆಸಿರುವುದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನರೇಂದ್ರ ಮೋದಿ ಅವರು ಪ್ರಧಾನಿ ಎಂಬುದನ್ನು ಮರೆತು ಕೆಳಮಟ್ಟದ ಆಧಾರ ರಹಿತ ಬೇಜವಾಬ್ದಾರಿ ಆರೋಪ ಮಾಡಿದ್ದಾರೆ. ಅದು ನನಗೆ ಸ್ಪಷ್ಟವಾಗಿ ಗೊತ್ತಾಯಿತು. ಜೈಲಿಗೆ ಹೋದ ಲೂಟಿ ಹೊಡೆದ ಯಡಿಯೂರಪ್ಪ ಅವರನ್ನು ಪಕ್ಕದಲ್ಲೇ ಕೂರಿಸಿಕೊಂಡು ಲಜ್ಜೆ ಗೆಟ್ಟು ‘ಸಿದ್ದರಾಮಯ್ಯ ಸರ್ಕಾರ್ 10 ಪರ್ಸೆಂಟ್‌ ಸರ್ಕಾರ್’ ಎಂದು ಹೇಳಲು ಅವರಿಗೆ ನಾಚಿಕೆಯಾಗಬೇಕು. ನರೇಂದ್ರ ಮೋದಿ ದೇಶದ ಪ್ರಧಾನಿಯಾಗಲು ಅರ್ಹರಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಮೋದಿ ಅವರ ವಿರುದ್ಧ ವಾಗ್ದಾಳಿ ಮಾಡಿದರು.

ಅವರು ಬಳ್ಳಾರಿಯ ಹೊಸಪೇಟೆಯಲ್ಲಿ ಶನಿವಾರ ಕಾಂಗ್ರೆಸ್ ಆಯೋಜಿಸಿದ ‘ಜನಾರ್ಶೀವಾದ ಸಮಾವೇಶ’ದಲ್ಲಿ ಮಾತನಾಡುತ್ತಾ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯು ಲೋಕಸಭಾ ಚುನಾವಣೆಗೆ ನಾಂದಿ ಆಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ರಾಷ್ಟ್ರದಲ್ಲಿ ಮತ್ತೆ ಕಾಂಗ್ರೆಸ್ ಗೆದ್ದು, ರಾಹುಲ್‌ ಗಾಂಧಿ ಪ್ರಧಾನಿ ಆಗಲು ಎಲ್ಲರೂ ಸಂಕಲ್ಪ ಮಾಡಬೇಕು’ ಎಂದು ನೆರೆದಿದ್ದ ಬೃಹತ್ ಜನಸ್ತೋಮಕ್ಕೆ ಕರೆ ನೀಡಿದ್ದಾರೆ.

‘ರಾಜ್ಯದಲ್ಲಿ ಕೊಲೆ ಸುಲುಗೆ ಹೆಚ್ಚಿದೆ. ಕಾನೂನು ಸುವ್ಯವಸ್ಥೆ ಕುಸಿದೆ . ಮೋದಿ ಅವರೇ, ನೀವು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅಲ್ಲಿ ಏನಾಯಿತು? ಪಕ್ಕದ ಹರಿಯಾಣದಲ್ಲಿ ಏನಾಗುತ್ತಿದೆ. ಉತ್ತರಪ್ರದೇಶದಲ್ಲಿ ಏನಾಗುತ್ತಿದೆ ಗಮನಿಸಿದ್ದೀರಾ? ಅಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳು ಕಾಣುತ್ತಿಲ್ಲಾವಾ? ದೇಶದ ಪ್ರಧಾನಿಯಾಗಿ ಸುಳ್ಳಿನ ಕಂತೆಯನ್ನು ಬಿಚ್ಚಿಡುವ ಪ್ರಯತ್ನ ಮಾಡಿದ್ದೀರಿ. ನೀವು ಎಷ್ಟೇ ಸುಳ್ಳು ಹೇಳಿದರೂ ಈ ನಾಡಿನ ಜನರ ನಿಮ್ಮನ್ನು ನಂಬಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಅಮಿತ್‌ ಶಾ ನಿಮ್ಮ ರಾಜ್ಯದವರು. ಕೊಲೆ ಕೇಸ್‌ನಲ್ಲಿ ಜೈಲಿಗೆ ಹೋಗಿದ್ದನ್ನು, ಗೊದ್ರಾ ಅತ್ಯಾಕಾಂಡವನ್ನು ಮರೆತಿರಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ನಿಮ್ಮ ಸುಳ್ಳು, ಕೋಮುವಾದ ಕರ್ನಾಟಕದಲ್ಲಿ ನಡೆಯಲು ಸಾಧ್ಯವಿಲ್ಲ. ರಾಜ್ಯದ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದಾರೆ ಎಂದರು.

‘ಈ ನಾಡು ಬಸವಣ್ಣ, ಕನಕದಾಸ, ಕುವೆಂಪು, ಶಿಶುನಾಳಾ ಷರೀಪರ ನಾಡು. ಇಲ್ಲಿ ಕೋಮುವಾದ, ಜಾತಿ ಸಂಘರ್ಷದ ಬೆಂಕಿ ಹಚ್ಚಿ ಕರ್ನಾಟಕವನ್ನು ಹಿಡಿಯಬೇಕೆಂಬ ನಿಮ್ಮ ಕನಸು ಎಂದು ಸಕಾರ ಆಗಲಾರದು ಎಂದು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group