ಸುಳ್ಯ ಕಾಲೇಜು ವಿದ್ಯಾರ್ಥಿನಿಯ ಇರಿದು ಕೊಲೆ : ಕ್ಯಾಂಪಸ್ ಫ್ರಂಟ್ ಖಂಡನೆ

ವರದಿಗಾರ (ಫೆ 20) : ಸುಳ್ಯದ ಎನ್.ಎಮ್.ಸಿ ಕಾಲೇಜಿನ ಬಿ.ಎಸ್ಸಿ ವಿದ್ಯಾರ್ಥಿನಿ ಅಕ್ಷತಾಳ ಕೊಲೆ ಪ್ರಕರಣವನ್ನು ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾ ಸಮಿತಿಯು ಖಂಡಿಸುತ್ತಿದೆ. ಕ್ಷುಲ್ಲಕ ಕಾರಣಗಳಿಗೆ ತನ್ನ ಸಹವಿದ್ಯಾರ್ಥಿನಿಯನ್ನೇ ಕೊಂದಂತಹ ಘಟನೆಯು ವಿದ್ಯಾರ್ಥಿ ಸಮುದಾಯದಲ್ಲೇ ಕಪ್ಪು ಚುಕ್ಕೆ ಎಂಬಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಭಿಪ್ರಾಯಪಡುತ್ತಿದೆ. ಘಟನೆಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿಯಬೇಕಾಗಿದ್ದರೂ, ಕೊಲೆಯಂತಹ ಅಪರಾಧ ಕೃತ್ಯಗಳು ಎಸಗುವುದು ಸರಿಯಲ್ಲ ಎಂದು ದ.ಕ ಕಾರ್ಯದರ್ಶಿ ಸಾದಿಕ್ ಪುತ್ತೂರ್ ರವರು ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ನಡೆಯುವ ಘಟನೆಗಳನ್ನು ನೋಡುವಾಗ ಸರಕಾರಗಳು ಈ ಬಗ್ಗೆ ಹಿಚ್ಚಿನ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ, ಕಾರಣ ರಾಜ್ಯದ ಕಳೆದ ಹಲವು ತಿಂಗಳುಗಳಿಂದ ವಿದ್ಯಾರ್ಥಿಗಳ ಮೇಲಿನ ಹಲ್ಲೆ, ಕೊಲೆ, ಅತ್ಯಾಚಾರ, ಮತ್ತು ಆತ್ಮಹತ್ಯೆ ಪ್ರಕರಣ ಅತೀ ಹೆಚ್ಚಾಗಿ ನಡೆಯುತ್ತಿವೆ. ಇಂತಹ ಪ್ರಕರಣಗಳು ರಾಜ್ಯದಲ್ಲಿ ಸಂಭವಿಸುವಾಗ ಈ ಬಗ್ಗೆ ಹೆಚ್ಚಿನ ಕ್ರಮಗಳನ್ನು ಜರುಗಿಸದಿರುವುದೇ ಮತ್ತು ಸರಕಾರದ ನಿರ್ಲಕ್ಷ್ಯತನವೇ ಕಾರಣ. ಅಲ್ಲದೇ ಪ್ರಸ್ತುತ ಸುಳ್ಯದಲ್ಲಿ ನಡೆದ ಘಟನೆಯು ವಿದ್ಯಾರ್ಥಿಗಳಲ್ಲಿ ಅಭದ್ರತೆಯ ವಾತಾವರಣವನ್ನು ಸೃಷ್ಠಿ ಮಾಡಿರುವುದರಿಂದ ಸರಕಾರ ತನ್ನ ಪಠ್ಯ ಕ್ರಮಗಳಲ್ಲಿ “ ಮೌಲ್ಯಾಧಾರಿತ ಶಿಕ್ಷಣ” ಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕಾಗುತ್ತದೆ.
ಆದುದರಿಂದ ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮಗಳು ತರಬೇಕು ಮತ್ತು “ಮೌಲ್ಯಾಧಾರಿತ ಶಿಕ್ಷಣ” ನೀಡುವಲ್ಲಿ ಸರಕಾರ ಮುತುವರ್ಜಿ ವಹಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತಿದೆ ಎಂದು ಜಿಲ್ಲಾ ಜೊತೆ ಕಾರ್ಯದರ್ಶಿ ನಿಝಾಮುದ್ದೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
