ರಾಜ್ಯ ಸುದ್ದಿ

ಫ್ಯಾಶಿಸ್ಟರ ಬೆದರಿಕೆಗೆ ಮಣಿಯದೆ ಅನೀತಿ ಅಕ್ರಮಗಳ ವಿರುದ್ಧ ಧ್ವನಿಯೆತ್ತುವ ಜವಾಬ್ದಾರಿ ಯುವಜನತೆಯ ಮೇಲಿದೆ:ಶುಹೈಬ್ ಪಿ.ವಿ.

ಮೈಸೂರಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಬೃಹತ್ ವಿದ್ಯಾರ್ಥಿ ಜಾಥಾ ಹಾಗೂ ಸಮಾವೇಶ.

ವರದಿಗಾರ (ಮಾ.19): ಜೆ.ಎನ್.ಯು ಸಂಶೋಧನಾ ವಿದ್ಯಾರ್ಥಿ ನಜೀಬ್ ನಾಪತ್ತೆ ಪ್ರಕರಣವನ್ನು ಪ್ರಶ್ನಿಸಿದರೆ ರಾಷ್ಟ್ರದ್ರೋಹಿಗಳು ಎಂಬ ಹಣೆಪಟ್ಟಿಯನ್ನು ಕಟ್ಟಲಾಗುತ್ತಿದೆ. ಸರ್ಕಾರದ ಜನವಿರೋಧಿ ನೀತಿಯ ಬಗ್ಗೆ ಮಾತನಾಡಿದರೆ, ಮತನಾಡಿದವರನ್ನೇ ಗುರಿಪಡಿಸಲಾಗುತ್ತಿದೆ ಮತ್ತು ಅವರ ಧ್ವನಿಯನ್ನು ಅಡಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಆದರೆ ಫ್ಯಾಶಿಸ್ಟರ ಬೆದರಿಕೆಗೆ ಮಣಿಯದೆ ಅನೀತಿ ಅಕ್ರಮಗಳ ವಿರುದ್ಧ ಧ್ವನಿಯೆತ್ತುವ ಜವಾಬ್ದಾರಿ ಯುವಜನತೆಯ ಮೇಲಿದೆ ಇಲ್ಲವಾದಲ್ಲಿ ಭಾರತದ ಭವಿಷ್ಯ ಕರಾಳವಾಗಲಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷರಾದ ಶುಹೈಬ್ ಪಿ. ವಿ. ಎಚ್ಚರಿಸಿದ್ದಾರೆ.

ಅವರು ಸಾಂಸ್ಕೃತಿಕ ನಗರಿ ಮೈಸೂರಿನ ಶಾಂತಿನಗರದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಹಮ್ಮಿಕೊಂಡಿದ್ದ ‘ರಾಜಕೀಯ ಬೂಟಾಟಿಕೆಯನ್ನು ನಿಲ್ಲಿಸಿ, ವಿದ್ಯಾರ್ಥಿಗಳ ರಕ್ಷಣೆಯನ್ನು ಖಾತರಿಪಡಿಸಿ’ ಎಂಬ ಘೋಷಣೆಯೊಂದಿಗೆ ನಡೆದ ವಿದ್ಯಾರ್ಥಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಬ್ದುಲ್ ಮಜೀದ್, ತಮ್ಮ ಮಕ್ಕಳ ವಿಷಯದಲ್ಲಿ ವಿಧಾನಸಭೆಯಲ್ಲಿ ಗಂಟೆಗಟ್ಟಲೆ ಮಾತನಾಡುವ ಶಾಸಕರು, ಇಲ್ಲಿನ ದಮನಿತ, ಅಲ್ಪಸಂಖ್ಯಾತ, ದಲಿತ ಹಾಗೂ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ, ಶೋಷಣೆ, ದಬ್ಬಾಳಿಕೆಯ ವಿರುದ್ಧ ತುಟಿ ಬಿಚ್ಚದೇ ಇರುವುದು ವಿಪರ್ಯಾಸವೇ ಸರಿ. ಸರಕಾರಿ ಶಾಲೆಗಳಲ್ಲಿಯೇ ವಿದ್ಯಾರ್ಥಿಗಳಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಅಸಹಜ ಸಾವು ನಡೆಯುತ್ತಿದ್ದರೂ ಸರಕಾರ ಈ ಬಗ್ಗೆ ಎಚ್ಚೆತ್ತುಕೊಳ್ಳದೆ ವಿದ್ಯಾರ್ಥಿಗಳನ್ನು ಭಯದ ವಾತಾವರಣಕ್ಕೆ ದೂಡಿದೆ. ಹೆಸರಿಗೆ ಮಾತ್ರ ಶಿಕ್ಷಣ ಸಚಿವರೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವುದು ಶಿಕ್ಷಣ ಸಚಿವರ ಅಭಿವೃದ್ಧಿಯ ಮಟ್ಟವನ್ನು ಸೂಚಿಸುತ್ತದೆ . ವಿದ್ಯಾರ್ಥಿ ವಿರೋಧಿ ನೀತಿ ಹಾಗೂ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಧ್ವನಿ ಎತ್ತುವ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ದುಡಿಯುವ ಜನನಾಯಕನನ್ನು ಮುಂಬರುವ ಚುನಾವಣೆಯಲ್ಲಿ ಆರಿಸುವುದರ ಮೂಲಕ ವಿದ್ಯಾರ್ಥಿಗಳ ಧ್ವನಿಯನ್ನು ವಿಧಾನಸಭೆಗೆ ಕಳುಹಿಸಿಕೊಡುವ ಅವಶ್ಯಕತೆಯಿದೆ ಎಂದು ಹೇಳಿದರು.

ಪ್ರಗತಿಪರ ಹೋರಾಟಗಾರ, ‘ಉಡುಪಿ ಚಲೋ’ ರೂವಾರಿ, ದಲಿತ ನಾಯಕ, ಬಿ.ಆರ್. ಭಾಸ್ಕರ್ ಪ್ರಸಾದ್ ಮಾತನಾಡಿ, ಮೈಸೂರಿನ ಸಂಸದ ಪ್ರತಾಪ್ ಸಿಂಹನ ಅವಿವೇಕಿತನದಿಂದ ನಗರದ ಘನತೆಗೆ ಧಕ್ಕೆಯಾಗುತ್ತಿದ್ದು, ಇಂತಹವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕಾಗಿದೆ ಎಂದು ಹೇಳಿದರು.

ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ ಮಹಮ್ಮದ್ ಶಾಕಿಬ್, ಮಹಾರಾಜ ಕಾಲೇಜಿನ ಉಪನ್ಯಾಸಕಾರದ ಸಂದೀಪ್ ಸಂದರ್ಭೋಚಿತವಾಗಿ ಮಾತನಾಡಿದರು.

ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಭಾಷಣ ಮಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಧ್ಯಕ್ಷ ಮಹಮ್ಮದ್ ತಪ್ಸೀರ್, ನಮ್ಮನ್ನಾಳುವ ಸರಕಾರಗಳು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ ಮತ್ತು ತಮ್ಮ ಹಕ್ಕುಗಳಿಗೋಸ್ಕರ ವಿದ್ಯಾರ್ಥಿಗಳ ಹೋರಾಟವನ್ನು ಸರಕಾರವು ನಿಯಂತ್ರಿಸುತ್ತಿದೆ.ಸರಕಾರಗಳು ವಿದ್ಯಾರ್ಥಿಗಳಿಗೆ ರಕ್ಷಣೆ ಮತ್ತು ಹಕ್ಕುಗಳನ್ನು ಖಾತ್ರಿ ಪಡಿಸುವವರೆಗೂ ವಿದ್ಯಾರ್ಥಿಗಳ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ನಿವೃತ್ತ ಡಿ.ಡಿ.ಪಿ.ಐ ಪುಟ್ನಂಜಯ್ಯ , ಪಿ.ಎಫ್.ಐ ಜಿಲ್ಲಾಧ್ಯಕ್ಷ ಅಮೀನ್ ಸೇಠ್, ಬಿ.ವಿ.ಎಸ್ ಜಿಲ್ಲಾ ನಾಯಕ ಗಣೇಶ್ ಮೈಸೂರು, ಯುವ ಫೆಡರೇಶನ್ ಅಧ್ಯಕ್ಷ ಮೊಹಿನುದ್ದೀನ್, ರಾಜ್ಯ ಪದಾಧಿಕಾರಿಗಳಾದ ಮುಸವ್ವಿರ್, ಸದಕತುಲ್ಲಾ, ಆರಿಫ್, ನ್ಯಾಯವಾದಿ ಅಬೂತಾಹಿರ್, ಜಿಲ್ಲಾಧ್ಯಕ್ಷ ನದೀಮ್ ಉಪಸ್ಥಿತರಿದ್ದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಕಿರ್ ಸ್ವಾಗತಿಸಿ,ಫಯಾಝ್ ದೊಡ್ಡಮನೆ ವಂದಿಸಿ, ರಿಯಾಝ್ ಕಡಂಬು ಹಾಗೂ ಮುಫೀಧಾ ಕಾರ್ಯಕ್ರಮ ನಿರೂಪಿಸಿದರು. ಫಯಾಝ್ ದೊಡ್ಡಮನೆ ವಂದಿಸಿದರು. ಸಮಾವೇಶದ ಮೊದಲು ಉದಯಗಿರಿಯಿಂದ ಬೃಹತ್ ವಿದ್ಯಾರ್ಥಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು . ಪಸಕ್ತ ರಾಜಕೀಯ ವಿದ್ಯಾಮಾನಗಳನ್ನು ಬಿಂಬಿಸು ಸ್ಥಬ್ದ ಚಿತ್ರ ಮತ್ತು ನಾಟಕ ಎಲ್ಲರ ಗಮನ ಸೆಳೆಯಿತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group