ರಾಷ್ಟ್ರೀಯ ಸುದ್ದಿ

ಬಿಜೆಪಿಯನ್ನು ಒದ್ದೋಡಿಸಲು ಸೋನಿಯಾ- ಮಮತಾ ಬ್ಯಾನರ್ಜಿ ರಣತಂತ್ರ

ವರದಿಗಾರ (ಮಾ.29): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಯಲ್ಲಿರುವ ಬಿಜೆಪಿಯನ್ನು ಕೆಳಗಿಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ನೂತನ ರಣತಂತ್ರವನ್ನು ರಚಿಸಿದ್ದು, ಬಿಜೆಪಿಗೆ ಎಚ್ಚರಿಕೆಯನ್ನು ನೀಡಿದೆ.

ಕಾಂಗ್ರೆಸ್ ಒಳಗೊಂಡಂತೆ ವಿರೋಧ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಫೆಡರಲ್ ಫ್ರಂಟ್ ಸದ್ಯದಲ್ಲೇ ಅಸ್ತಿತ್ವಕ್ಕೆ ಬರಲಿದೆ. ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಕಾಂಗ್ರೆಸ್ ನಡೆಸುತ್ತಿರುವ ಪ್ರಯತ್ನಗಳಿಗೆ ಪರ್ಯಾಯವಾಗಿ ಫೆಡರಲ್ ಫ್ರಂಟ್ ಸ್ಥಾಪನೆ ನಿಟ್ಟಿನಲ್ಲಿ ಉಭಯ ನಾಯಕಿ ಯರು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿಯನ್ನು ಎದುರಿಸುವ ನಿಟ್ಟಿನಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದಂತೆ ಆಯಾ ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚಿನ ಅವಕಾಶ ನೀಡುವ ಬಗ್ಗೆಯೂ  ಚರ್ಚಿಸಲಾಗಿದೆ.ಪ್ರಾದೇಶಿಕ ಪಕ್ಷಗಳು ಬಿಜೆಪಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸಹಕರಿಸಬೇಕು ಎಂದು ಮಮತಾ ಸ್ಪಷ್ಟವಾಗಿ ಸೋನಿಯಾ ಅವರನ್ನು ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಸಮಷ್ಟಿ ಹಿತದೃಷ್ಟಿಯಿಂದ ಕಾಂಗ್ರೆಸ್ ಕೆಲವೆಡೆ ತನ್ನ ಹಿತಾಸಕ್ತಿಯನ್ನು ತ್ಯಾಗ ಮಾಡುವಂತೆ ಮಮತಾ ಕರೆ ನೀಡಿದ್ದಾರೆ. ಈ ಮಧ್ಯೆ ಮಮತಾ ಬ್ಯಾನರ್ಜಿಯವರು ಎನ್‌ಸಿಪಿ ಮುಖಂಡ ಶರದ್ ಪವಾರ್ ಅವರ ಜತೆಗೂ ಚರ್ಚಿಸಿದ್ದು, ಕಾಂಗ್ರೆಸ್ ಹೊರತಾದ ವಿರೋಧಿ ಒಕ್ಕೂಟ ಕಾರ್ಯಸಾಧು ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಲಾಗಿದೆ.
ರಾಷ್ಟ್ರರಾಜಕಾರಣದಲ್ಲಿ ಮಮತಾ ಪ್ರಧಾನ ಪಾತ್ರ ವಹಿಸಿದರೂ, ಕಾಂಗ್ರೆಸ್ ಪಕ್ಷವನ್ನು ಕೂಡಾ ಸೇರಿಸಿಕೊಳ್ಳಬೇಕು ಎಂಬ ಅಂಶ ಇದೀಗ ಬಂಗಾಳ ಮುಖ್ಯಮಂತ್ರಿಗೆ ಮನದಟ್ಟಾಗಿದೆ. ಅರ್ಧ ಗಂಟೆಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ, “ಸೋನಿಯಾ ಜತೆ ಸದಾ ಉತ್ತಮ ಸಂಬಂಧವನ್ನು ಹೊಂದಿದ್ದು, ಇದು ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group