ರಾಷ್ಟ್ರೀಯ ಸುದ್ದಿ

ಸದನಗಳು ಪ್ರತಿಭಟನೆಯ ವೇದಿಕೆಗಳಾಗಿವೆ: ಎಂ.ವೆಂಕಯ್ಯ ನಾಯ್ಡು ಕಳವಳ

ವರದಿಗಾರ (ಮಾ.29): ರಾಜಕೀಯ ತಂತ್ರಗಳಿಗೆ ಕಲಾಪಗಳ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ. ಸದನಗಳು ಪ್ರತಿಭಟನೆಯ ವೇದಿಕೆಗಳಾಗಿವೆ ಎಂದು ನಿವೃತ್ತ ಸಂಸದರಿಗೆ ಬೀಳ್ಕೊಡುಗೆ ಸಂದರ್ಭದಲ್ಲಿ ಭಾವುಕರಾದ ಸಭಾಪತಿ ಎಂ.ವೆಂಕಯ್ಯ ನಾಯ್ಡು ಕಳವಳ ವ್ಯಕ್ತಪಡಿಸಿದ್ದಾರೆ.

ಅವರು ರಾಜ್ಯಸಭೆಯ ಕಲಾಪಗಳಿಗೆ ಅಡ್ಡಿಪಡಿಸುತ್ತಿರುವ ವಿರೋಧ ಪಕ್ಷಗಳ ಸಂಸದರನ್ನು ಬುಧವಾರ ತರಾಟೆಗೆ ತೆಗೆದುಕೊಂಡಿದ್ದಾರೆ.‘ರಾಜಕೀಯದ ಗುಣಮಟ್ಟ ಮತ್ತು ಸದನದ ಘನತೆಯನ್ನು ಇನ್ನಷ್ಟು ಕೀಳುಮಟ್ಟಕ್ಕೆ ಕೊಂಡೊಯ್ಯುವುದು ಬೇಡ’ ಎಂದು ಅವರು ಸಂಸದರಲ್ಲಿ ಮನವಿ ಮಾಡಿದ್ದಾರೆ. ಸಂವಿಧಾನದ ಆಶಯ ಮತ್ತು ಮೌಲ್ಯಗಳಿಗೆ ಧಕ್ಕೆಯಾಗದಂತೆ ಮತ್ತು ಸದನದ ಗೌರವಕ್ಕೆ ಚ್ಯುತಿಯಾಗದಂತೆ ಸಂಸದರು ಘನತೆಯಿಂದ ವರ್ತಿಸಬೇಕು ಎಂದು ನಾಯ್ಡು ಬುದ್ಧಿಮಾತು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಸದನದ ಸದಸ್ಯರು ಪ್ರತಿಯೊಂದಕ್ಕೂ ಸ್ಪೀಕರ್‌ ಅಥವಾ ಸಭಾಪತಿ ಪೀಠದ ಎದುರು ನುಗ್ಗುವುದು, ಎಲ್ಲವೂ ಅಲ್ಲಿಯೇ ನಿರ್ಣಯವಾಗಬೇಕು ಎನ್ನುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group