15 ಲಕ್ಷ ನೀಡುವುದಾಗಿ ಎಂದೂ ಪ್ರಧಾನಿ ಮೋದಿ ಹೇಳಿಲ್ಲ: ಉಲ್ಟಾ ಹೊಡೆದ ಬಿಜೆಪಿ ಶಾಸಕ

ವರದಿಗಾರ (ಮೇ.28): ದೇಶದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಜಮೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಎಂದಿಗೂ ಹೇಳಿಲ್ಲ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ಅಮರ್ ಸೇಬಲ್ ಹೇಳಿಕೆ ನೀಡಿ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ವಿಪಕ್ಷಗಳು ತಪ್ಪು ಮಾಹಿತಿಯನ್ನು ಹರಡಿ ಜನರಲ್ಲಿ ಗೊಂದಲಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಎನ್ ಡಿಎ ಸರಕಾರದ ನಾಲ್ಕು ವರ್ಷ ಆಡಳಿತ ಪೂರಕೈಯ ಬಗ್ಗೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಖಾತೆಗೆ 15 ಲಕ್ಷ ಜಮೆ ಮಾಡುವ ಭರವಸೆಯು ಬಿಜೆಪಿಯ ಪ್ರಣಾಳಿಕೆಯಲ್ಲಿರಲಿಲ್ಲ ಎಂದು ಹೇಳುವ ಮೂಲಕ ಜನರನ್ನು ಮತ್ತೆ ವಂಚಿಸಲು ಪ್ರಯತ್ನಿಸಿದ್ದಾರೆ.
