ರಾಷ್ಟ್ರೀಯ ಸುದ್ದಿ

ಅತ್ಯಾಚಾರ ಆರೋಪದಲ್ಲಿ ಮತ್ತೊಬ್ಬ ಬಿಜೆಪಿ ಶಾಸಕ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಶಾಸಕ

ವರದಿಗಾರ (ಮೇ. 29) : ಕುಶಾಗ್ರ ಸಾಗರ್ ಉತ್ತರಪ್ರದೇಶ ಲಖನೌದ ಬಿಸೌಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮದುವೆಯಾಗುವುದಾಗಿ ನಂಬಿಸಿ ಸತತ ಎರಡು ವರ್ಷಗಳಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಉತ್ತರಪ್ರದೇಶದ ಬದಾಯು ಪ್ರದೇಶದ ಯುವತಿಯೊಬ್ಬಳು ಕುಶಾಗ್ರ ಸಾಗರ್  ವಿರುದ್ಧ ದೂರು ದಾಖಲಿಸಿದ್ದಾರೆ.

ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಬಿಜೆಪಿ ಶಾಸಕ ಕುಶಾಗ್ರ ಸಾಗರ್ ನನ್ನ ಮೇಲೆ ಮೊದಲ ಬಾರಿ ಅತ್ಯಾಚಾರ ಎಸಗಿದಾಗ ಆತನ ಜತೆ ಮದುವೆ ಮಾಡಿಸುವುದಾಗಿ ಕುಶಾಗ್ರ ತಂದೆ ಯೋಗೇಂದ್ರ ಸಾಗರ್ ಭರವಸೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ವರದಿ ಮಾಡಿವೆ.

‘ಕುಶಾಗ್ರ ಅವರ ಮದುವೆ ಜೂನ್ 17ರಂದು ನಡೆಯಲಿದೆ. ಈ ಮದುವೆಯಾಗಲು ನಾನು ಬಿಡುವುದಿಲ್ಲ. ಅಕಸ್ಮಾತ್ ಅವರ ವಿವಾಹ ನಡೆದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಸಂತ್ರಸ್ಥೆ ಯುವತಿ ದೂರಿನಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.

ಈ ವಿಚಾರವನ್ನು ಬಯಲು ಮಾಡದಿದ್ದಲ್ಲಿ 20 ಲಕ್ಷ ಹಣ ಕೊಡುವುದಾಗಿಯೂ ಆಮಿಷವನ್ನು ಒಡ್ಡಲಾಗಿತ್ತು ಎಂದು ಹೇಳಲಾಗಿದೆ. ಇದೀಗ ನನ್ನ ಜೀವನ ಸಂಕಷ್ಟಕ್ಕೆ ಸಿಲುಕಿದೆ. ನಾನೀಗ ಎಲ್ಲಿಗೆ ಹೋಗಲಿ? ಎಂದು ಯುವತಿ ಪೊಲೀಸ್ ಠಾಣೆ ಮುಂದೆ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

ಈಗಾಗಲೇ ಈ ಪ್ರಕರಣದ ಬಗ್ಗೆ ತನಿಖೆಯನ್ನು ಕೈಗೊಳ್ಳಲಾಗಿದ್ದು, ತನಿಖೆ ಮುಕ್ತಾಯದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿ ಹೇಳಿಕೆ ನೀಡಿದ್ದಾರೆ.

16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪದ ಅಡಿಯಲ್ಲಿ ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ಜೈಲು ವಾಸ ಅನುಭವಿಸುತ್ತಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group