ಪೆಟ್ರೋಲ್ ಬೆಲೆ ಏರಿಕೆ; ಮೋದಿ ಮಾಡಿದ್ರೆ ಕೇಳಲ್ಲ, ನಾನು ಮಾಡಿದ್ರೆ ಕೇಳ್ತಿರಾ -ಕುಮಾರಸ್ವಾಮಿ

ವರದಿಗಾರ- ಜು.14: ಪೆಟ್ರೋಲ್ ಬೆಲೆ ಏರಿಕೆಯನ್ನು ಮೋದಿ ಮಾಡಿದ್ರೆ ಕೇಳಲ್ಲ, ನಾನು ಮಾಡಿದ್ರೆ ಯಾಕೆ ಏರಿಕೆ ಮಾಡಿದ್ದು ಕೇಳ್ತಿರಾ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರಶ್ನಿಸಿದ್ದಾರೆ.
ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಮಿತಿಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಸ್ಪಂದನಾ ಕಾರ್ಯಕ್ರಮದಲ್ಲಿ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡುತ್ತಾ, ನಾನು ರೈತರ ಸಾಲಮನ್ನಾ ಮಾಡಲು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಮಾಡಿರುವುದಾಗಿ ಹೇಳಿ ತೈಲ ಬೆಲೆ ಏರಿಕೆಯ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.
ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಎಷ್ಟು ಬಾರಿ ತೈಲ ಬೆಲೆ ಹೆಚ್ಚಳ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಹಾಗಿದ್ದರೂ ಈ ಬಗ್ಗೆ ಮಾಧ್ಯಮಗಳು ಏಕೆ ಚಕಾರ ಎತ್ತಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕೇಳಿದ್ದಾರೆ.
