ರಾಜ್ಯ ಸುದ್ದಿ

‘ದೇಶದ ಇತಿಹಾಸದಲ್ಲೇ ಬಿಜೆಪಿಯಂತಹ ದ್ವೇಷದ ರಾಜಕಾರಣ ಯಾರೂ ಮಾಡಿರಲಿಲ್ಲ’: ದಿನೇಶ್ ಗುಂಡೂರಾವ್

‘ವಿದೇಶ ಸುತ್ತುವುದು ಮತ್ತು ಮನ್ ಕೀ ಬಾತ್ ಪ್ರಧಾನಿ ಮೋದಿಯವರ ದೊಡ್ಡ ಸಾಧನೆಯಾಗಿದೆ’

ವರದಿಗಾರ (ಜು.26): ಬಿಜೆಪಿಯ ದ್ವೇಷ ರಾಜಕೀಯದ ವಿರುದ್ಧ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ‘ದೇಶದ ಇತಿಹಾಸದಲ್ಲೇ ಬಿಜೆಪಿಯಂತಹ ದ್ವೇಷದ ರಾಜಕಾರಣ ಯಾರೂ ಮಾಡಿರಲಿಲ್ಲ’ ಎಂದು ಹೇಳಿದ್ದಾರೆ.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ವರದಿಗಾರರೊಂದಿಗೆ ಮಾತನಾಡುತ್ತಾ, ‘ಬಿಜೆಪಿಯವರು ಭಾವನಾತ್ಮಕ ವಿಷಯಗಳ ಮೇಲೆ ಜನರ ಭಾವನೆ ಕೆರಳಿಸುತ್ತಿದ್ದು, ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಸಿರುವುದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಯಾರೂ ಇಂತಹ ದ್ವೇಷದ ರಾಜಕಾರಣ ಮಾಡಿರಲಿಲ್ಲ’ ಎಂದಿದ್ದಾರೆ.

ವಿಪಕ್ಷದ ನಾಯಕರ ಮೇಲೆ ಐಟಿ ದಾಳಿ ನಡೆಸಿ ಬೆದರಿಕೆ ಹಾಕುತ್ತಿದ್ದಾರೆ. ಮಾತ್ರವಲ್ಲದೆ ಮಾಧ್ಯಮಗಳಿಗೂ ಭಯ ಹುಟ್ಟಿಸುತ್ತಿದ್ದಾರೆ.

‘ವಿದೇಶ ಸುತ್ತುವುದು ಮತ್ತು ಮನ್ ಕೀ ಬಾತ್ ಪ್ರಧಾನಿ ಮೋದಿಯವರ ದೊಡ್ಡ ಸಾಧನೆಯಾಗಿದೆ’ ಎಂದು ಹೇಳಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿಯ ಅನೇಕ ನಾಯಕರು ಪ್ರಧಾನಿ ಮೋದಿ, ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ನಡವಳಿಕೆಯಿಂದ ಬೇಸರಗೊಂಡಿದ್ದಾರೆ ಎಂದೂ ಅವರು ಹೇಳಿಕೊಂಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group