ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಪದಗ್ರಹಣದ ಆಹ್ವಾನ ಸ್ವೀಕರಿಸಿದ ಪಂಜಾಬ್ ಸಚಿವ ಸಿಧು

“ಕ್ರೀಡಾಪಟುಗಳು ಜನರನ್ನು ಒಟ್ಟುಗೂಡಿಸಿ ಸೇತುವೆಗಳನ್ನು ನಿರ್ಮಿಸುತ್ತಾರೆ, ಅಡೆತಡೆಗಳನ್ನು ಮುರಿಯುತ್ತಾರೆ”

ವರದಿಗಾರ (ಆ.02): ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಮಾಜಿ ಕ್ರಿಕೆಟಿಗ, ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್ (ಪಿಟಿಐ)ಪಕ್ಷದ ಇಮ್ರಾನ್ ಖಾನ್ ರವರ ಆಹ್ವಾನ ಪತ್ರಿಕೆಯನ್ನು ಮಾಜಿ ಕ್ರಿಕೆಟಿಗ, ಪಂಜಾಬ್ ಕ್ಯಾಬಿನೆಟ್ ಸಚಿವ ನವಜೋತ್ ಸಿಂಗ್ ಸಿಧು ಸ್ವೀಕರಿಸಿದ್ದಾರೆ.

ಇಮ್ರಾನ್ ಖಾನ್ ರವರ ಪ್ರಮಾಣ ವಚನ ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿ ಪ್ರತಿಕ್ರಿಯಿಸಿರುವ ಕ್ಯಾಬಿನೆಟ್ ಸಚಿವ ನವಜೋತ್ ಸಿಂಗ್ ಸಿಧು,”ಇದೊಂದು ಗೌರವಾನ್ವಿತ ಆಹ್ವಾನ, ನಾನು ಆಮಂತ್ರಣ ಪತ್ರಿಕೆಯನ್ನು ಸ್ವೀಕರಿಸುತ್ತೇನೆ. ಪ್ರತಿಭಾನ್ವಿತ ಪುರುಷರು ಮೆಚ್ಚುಗೆಯನ್ನು ಹೊಂದಿದ್ದಾರೆ, ಅಧಿಕಾರವುಳ್ಳವರು ಭಯಭೀತರಾಗುತ್ತಾರೆ, ಆದರೆ ಉತ್ತಮ ಗುಣ ನಡತೆಯುಳ್ಳವರು ವಿಶ್ವಾಸಾರ್ಹರಾಗಿದ್ದಾರೆ. ಖಾನ್ ಸಹೇಬ್ ಉತ್ತಮ ಗುಣ ನಡತೆಯ ವ್ಯಕ್ತಿ, ಅವರು ವಿಶ್ವಾಸಾರ್ಹರಾಗಬಹುದು. ಕ್ರೀಡಾಪಟುಗಳು ಜನರನ್ನು ಒಟ್ಟುಗೂಡಿಸಿ ಸೇತುವೆಗಳನ್ನು ನಿರ್ಮಿಸುತ್ತಾರೆ, ಅಡೆತಡೆಗಳನ್ನು ಮುರಿಯುತ್ತಾರೆ” ಎಂದು ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಕಳೆದ ವಾರ ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್ (ಪಿಟಿಐ)ಪಕ್ಷವು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ಆಗಸ್ಟ್ 11 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group