ರಾಷ್ಟ್ರೀಯ ಸುದ್ದಿ

‘ದ್ವೇಷ ಭಾಷಣ ಮಾಡಿದ ಯೋಗಿ ವಿರುದ್ಧ ಯಾಕೆ ಕಾನೂನು ಕ್ರಮ  ಕೈಗೊಳ್ಳಬಾರದು?’; 4 ವಾರದೊಳಗೆ ಉತ್ತರಿಸುವಂತೆ ಉತ್ತರ ಪ್ರದೇಶ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಅನುಮತಿ ನಿರಾಕರಿಸಿದ ರಾಜ್ಯ ಸರಕಾರದ ನಿರ್ಧಾರವನ್ನು ಎತ್ತಿ ಹಿಡಿದ  ಸುಪ್ರೀಂ ಕೋರ್ಟ್

ವರದಿಗಾರ (ಆ.21): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2007ರಲ್ಲಿ ಸಂಸದರಾಗಿದ್ದ ಸಂದರ್ಭ ಗೋರಖ್ಪುರದಲ್ಲಿ ಮಾಡಿದ್ದ ದ್ವೇಷ ಭಾಷಣ ವಿರುದ್ಧ ಯೋಗಿ ಆದಿತ್ಯನಾಥ್ ಮೇಲೆ ಕಾನೂನು ಕ್ರಮ ಯಾಕೆ ಕೈಗೊಳ್ಳಬಾರದೆಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರಕಾರವನ್ನು ಪ್ರಶ್ನಿಸಿದೆ.

ಈ ಬಗ್ಗೆ ಮುಂದಿನ 4 ವಾರದೊಳಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆ ನೀಡಿದೆ.

ಆದಿತ್ಯನಾಥ್ ಗೋರಖಪುರದ ಸಂಸದರಾಗಿದ್ದಾಗ ನಗರದ ರೈಲ್ವೆ ನಿಲ್ದಾಣದ ಹೊರಗೆ ಈ ದ್ವೇಷ ಭಾಷಣ ಮಾಡಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಆದಿತ್ಯನಾಥ್ ಭಾಷಣ ಪ್ರಚೋದನಕಾರಿಯಾಗಿತ್ತು ಹಾಗೂ ಮತೀಯ ಹಿಂಸೆ ಪ್ರೇರೇಪಿಸಿದೆ ಎಂದು  ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಮುಖ್ಯಮಂತ್ರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನಿರಾಕರಿಸಿದ ರಾಜ್ಯ ಸರಕಾರದ ನಿರ್ಧಾರವನ್ನು ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟಿನ ಆದೇಶವನ್ನು ಪ್ರಶ್ನಿಸಿ  ಸಲ್ಲಿಸಲಾಗಿದ್ದ ಅಪೀಲೊಂದರ ಮೇಲಿನ ವಿಚಾರಣೆ ನಡೆಸಿದ ನ್ಯಾಯಾಲಯ ಸರಕಾರಕ್ಕೆ ಮೇಲಿನಂತೆ ಸೂಚನೆ ನೀಡಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group