ರಾಜ್ಯ ಸುದ್ದಿ

ಗೌರಿ ಲಂಕೇಶ್ ಹತ್ಯಾ ದಿನ ‘ಪ್ರತಿರೋಧ ದಿನ’: ಕ್ಯಾಂಪಸ್ ಫ್ರಂಟ್

ವರದಿಗಾರ (ಸೆ.05): ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಂಗಳೂರು ಜಿಲ್ಲಾ ಸಮಿತಿಯು ಸಾಮಾಜಿಕ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯಾ ದಿನವನ್ನು ‘ಪತ್ರಿರೋಧ ದಿನ’ವನ್ನಾಗಿ ಬೆಂಗಳೂರಿನ ಎಂ.ಜಿ.ರಸ್ತೆ ನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು.

ವೀಡಿಯೋ ವೀಕ್ಷಿಸಿ:

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಂಗಳೂರು ಜಿಲ್ಲಾ ಸಮಿತಿಯು ಸಾಮಾಜಿಕ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯಾ ದಿನವನ್ನು 'ಪತ್ರಿರೋಧ ದಿನ'ವನ್ನಾಗಿ ಬೆಂಗಳೂರಿನ ಎಂ.ಜಿ.ರಸ್ತೆ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿತು.

Posted by Varadigara on Tuesday, 4 September 2018

ಪ್ರತಿರೋಧ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ, ‘ಗೌರಿ ಲಂಕೇಶ್ ಹಾಗೂ ವಿಚಾರವಾದಿಗಳನ್ನು ಕೊಂದಿರಬಹುದು ಆದರೆ ಅವರ ವಿಚಾರಗಳನ್ನು ಕೊಲ್ಲಲಾಗದು. ಅದನ್ನು ವಿದ್ಯಾರ್ಥಿ ಯುವ ಸಮೂಹ ಮುಂದುವರಿಸಲಿದೆ’. ಗೌರಿ ಲಂಕೇಶ್ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಕೈವಾಡವಿದೆ ಎಂದು ಇದೀಗಾಗಲೇ ತನಿಖೆಯಿಂದ ಬಹಿರಂಗಗೊಂಡಿದ್ದು, ಸನಾತನ ಸಂಸ್ಥೆಯನ್ನು ತಕ್ಷಣವಾಗಿ ನಿರ್ಭಂದಿಸುವಂತೆ ಮತ್ತು ಗೌರಿ ಹತ್ಯೆಯ ಹಿಂದಿರುವ ಕಾಣದ ಕೈಗಳನ್ನು ಕಾನೂನಿನ ಮುಂದೆ ತರುವಂತೆ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದರು.

ಈ ಸಂದರ್ಭ ಬೆಂಗಳೂರು ಜಿಲ್ಲಾಧ್ಯಕ್ಷ ಮುಬಾರಕ್, ಜಿಲ್ಲಾ ಕಾರ್ಯದರ್ಶಿ ಝುಭೈರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

 

 

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group