ರಾಷ್ಟ್ರೀಯ ಸುದ್ದಿ

ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಗಟ್ಟದ 18 ರಾಜ್ಯಗಳಿಗೆ ಸುಪ್ರೀ ಕೋರ್ಟ್ ಖಡಕ್ ಎಚ್ಚರಿಕೆ

ವರದಿ ಸಲ್ಲಿಸದ ರಾಜ್ಯಗಳಿಗೆ ವರದಿ ಸಲ್ಲಿಸಲು ಒಂದು ವಾರದ ಅವಕಾಶ

ವರದಿಗಾರ (ಸೆ.08): ಗೋ ರಕ್ಷಣೆ ಹೆಸರಿನಲ್ಲಿ ಹತ್ಯೆ, ಗುಂಪು ಹಲ್ಲೆ, ಹಿಂಸಾಚಾರ ತಡೆಗಟ್ಟದ 18 ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್ ಖಡಕ್ ಆದೇಶವನ್ನು ಹೊರಡಿಸಿದ್ದು, ಮುಂದಿನ ಒಂದು ವಾರದೊಳಗೆ ಈ ಬಗ್ಗೆ ವರದಿ ಸಲ್ಲಿಸಲು ಸೂಚನೆ ನೀಡಿದೆ.

ಗೋ ರಕ್ಷಣೆ ಹೆಸರಿನಲ್ಲಿ ನಡೆಸುತ್ತಿರುವ ಹಿಂಸೆ ಹಾಗೂ ದೊಂಬಿ ಹತ್ಯೆ ತಡೆಗಟ್ಟುವ ಕುರಿತು ಕ್ರಮಗೊಳ್ಳಲು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪಾಲಿಸದ 18 ರಾಜ್ಯಗಳಿಗೆ ಕಟ್ಟು ನಿಟ್ಟಿನ ಆದೇಶವನ್ನು ನೀಡಿದೆ.

29 ರಾಜ್ಯಗಳಲ್ಲಿ 11 ರಾಜ್ಯಗಳು ಹಾಗೂ ಏಳು ಕೇಂದ್ರಾಡಳಿತ ಪ್ರದೇಶಗಳು (ಯುಟಿಗಳು) ಮಾತ್ರ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುವ ಬಗ್ಗೆ ವರದಿಗಳನ್ನು ಸಲ್ಲಿಸಿವೆ. ಆದರೆ ಉಳಿದ ರಾಜ್ಯಗಳು ಮತ್ತು ಯುಟಿಗಳು ಈ ಸಂಬಂಧ ಕ್ರಮ ಕೈಗೊಳ್ಳದಿರುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಗೋ ರಕ್ಷಣೆ ಹೆಸರಿನಲ್ಲಿ ಹಿಂಸೆ ಹಾಗೂ ಉದ್ರಿಕ್ತ ಗುಂಪಿನಿಂದ ನಡೆಯುವ ಹಿಂಸಾಚಾರ ಮತ್ತು ಹತ್ಯೆಗಳನ್ನು ತಡೆಗಟ್ಟುವ ಕುರಿತು ಕ್ರಮಗೊಳ್ಳಲು ಸುಪ್ರೀಂಕೋರ್ಟ್ ಈಗಾಗಲೇ ಸೂಚನೆಗಳನ್ನು ನೀಡಿದೆ. ಇದನ್ನು ಕಡ್ಡಾಯವಾಗಿ ಅನುಸರಿಸಬೇಕು. ಈ ಸಂಬಂಧ ವರದಿಗಳನ್ನು ನೀಡಬೇಕು. ಇದನ್ನು ಸಲ್ಲಿಸದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೊನೆ ಅವಕಾಶ ನೀಡುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ ತಿಳಿಸಿದೆ.

ಈ ವರದಿಗಳನ್ನು ಒಂದು ವಾರದೊಳಗೆ ವರದಿ ಸಲ್ಲಿಸಲು ವಿಫಲವಾದರೆ, ಸಂಬಂಧಪಟ್ಟ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳು ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಪೀಠ ಹೇಳಿದೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group