ವರದಿಗಾರ-ಬೆಂಗಳೂರು: ಕೃಷಿಕರಲ್ಲದವರಿಗೆ ಬಗರ್ ಹುಕುಂ ಭೂಮಿಯನ್ನು ಮಂಜೂರು ಮಾಡಿದ ಆರೋಪದಲ್ಲಿ ಬಿಜೆಪಿ ನಾಯಕ, ಶಾಸಕ ಆರ್. ಅಶೋಕ್ ವಿರುದ್ದ ತನಿಖೆ ನಡೆಸಲು ಕರ್ನಾಟಕ ಸರಕಾರದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಆದೇಶ ಹೊರಡಿಸಿದ್ದಾರೆ.
ಆರ್. ಅಶೋಕ್ ಬಗರ್ ಹುಕುಂ ಸಕ್ರಮ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭ ಸರಕಾರಿ ಭೂಮಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಬಿಜೆಪಿ, ಮತ್ತು ಜೆಡಿಎಸ್ ಸದಸ್ಯರಿಗೆ ಮಂಜೂರು ಮಾಡಿದ್ದ ಕಾರಣಕ್ಕೆ ಅವರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ ಎಂದು ಕಂದಾಯ ಸಚಿವರು ಹೇಳಿದ್ದಾರೆ.
ಸಚಿವರ ಆದೇಶದೊಂದಿಗೆ ಬಿಜೆಪಿಯ ಪಾಲಿಗೆ ಮತ್ತೊಂದು ಆಕ್ರಮ ಸೇರ್ಪಡೆಯಾಗಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ನೀಡಿದ ದೂರು ಆಧರಿಸಿ ತನಿಖೆಗೆ ಆದೇಶ ಮಾಡಿಲಾಗಿದೆ.
