ವರದಿಗಾರ-ದೆಹಲಿ: ಜನರ ಖಾಸಗಿತನವು ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ.
ಸಂವಿಧಾನದ 21ನೇ ವಿಧಿಯಡಿ ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಬಹುದು ಎಂದು ನ್ಯಾಯಮೂರ್ತಿ ಜೆ. ಚಲಮೇಶ್ವರ್ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದಿಂದ ಈ ತೀರ್ಪನ್ನು ಪ್ರಕಟಿಸಿದೆ.
ಸಂವಿಧಾನದ ಅನುಚ್ಛೇದ 21ರ ಅಡಿಯಲ್ಲಿ ಖಾಸಗಿತನ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗ ಎಂದು ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂಕೋರ್ಟ್ ನ ತೀರ್ಪಿನಿಂದ ಕೇಂದ್ರಕ್ಕೆ ಹಿನ್ನಡೆಯಾದಂತಾಗಿದೆ. ವ್ಯಕ್ತಿಯ ಖಾಸಗಿತನ ಬಹಿರಂಗಗೊಳಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆಧಾರ್ಗಾಗಿ ಜನರ ವೈಯಕ್ತಿಕ ಮಾಹಿತಿ ಸಂಗ್ರಹಿಸುವುದರಿಂದ ಖಾಸಗಿತನದ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾ. ಪುಟ್ಟಸ್ವಾಮಿ ಅರ್ಜಿ ಸಲ್ಲಿಸಿದ್ದರು.
ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಬೇಕೇ ಬೇಡವೇ ಎಂಬ ವಿಚಾರವಾಗಿ ನ್ಯಾಯಪೀಠವು ಮೂರು ವಾರಗಳಲ್ಲಿ ಆರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿತ್ತು.
