ರಾಷ್ಟ್ರೀಯ ಸುದ್ದಿ

ಶಬರಿಮಲೆಗೆ ಮಹಿಳೆಯರ ಪ್ರವೇಶ ಕೋರಿ 2006 ರಲ್ಲಿ ಆರೆಸ್ಸೆಸ್ ಸುಪ್ರೀಮ್ ಕೋರ್ಟಿಗೆ ಅರ್ಜಿ ಸಲ್ಲಿಸಿತ್ತು !

ವರದಿಗಾರ (ಅ 21) : ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕಾಗಿ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ಕೋರುವಂತೆ ಆರೆಸ್ಸೆಸ್ 2006 ರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿತ್ತು ಎಂಬ ಆಘಾತಕಾರಿ ಮಾಹಿತಿಯನ್ನು ಕೇರಳದ ದೇವಸ್ಯಂ ಮಂತ್ರಿ ಕಡಗಂಪಳ್ಳಿ ಸುರೇಂದ್ರನ್ ಹೇಳಿದ್ದಾರೆಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಈ ಮೂಲಕ ಶಬರಿಮಲೆಯ ಘಟನೆಯ ಮೂಲಕ ಹಿನ್ನೆಲೆಯಲ್ಲಿ ನಿಂತು ಕುತಂತ್ರದ ಮೂಲಕ ದಾಳವುರುಳಿಸುತ್ತಿರುವ ಆರೆಸ್ಸೆಸ್ ಅಂಗಳಕ್ಕೆ ಚೆಂಡನ್ನು ದಾಟಿಸಿದ್ದಾರೆ.

2006 ರಲ್ಲಿ ಆರೆಸ್ಸೆಸ್ಸಿನ ಮುಂಚೂಣಿಯ ನಾಯಕರು ಶಬರಿಮಲೆಯಲ್ಲಿ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ಹೇಳಿದ್ದಾರೆ. ಸಂಘಪರಿವಾರ ಈಗ ಸುಪ್ರೀಂ ಕೋರ್ಟಿನ ತೀರ್ಪನ್ನು ತಮ್ಮ ರಾಜಕೀಯ ಬೇಳೆ ಬೇಯಿಸಲು ಉಪಯೋಗಿಸಿಕೊಳ್ಳುತ್ತಿದೆ ಎಂದು ಕಿಡಿ ಕಾರಿದ್ದಾರೆ. ಸುರೇಂದ್ರನ್, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಐದು ದಿನಗಳ ‘ಪಂದಳಂ – ತಿರುವನಂತಪುರಂ’ ಮಾರ್ಚನ್ನು ಅಯೋಧ್ಯೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರಥ ಯಾತ್ರೆಗೆ ಹೋಲಿಸಿದ್ದಾರೆ.

ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶದ ಕುರಿತಾಗಿನ ಸುಪ್ರೀಂ ಕೋರ್ಟಿನ ತೀರ್ಪಿನ ಹಿನ್ನೆಲೆಯಲ್ಲಿ ಕೇರಳ ಸರಕಾರ ಅದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳುತ್ತಿರುವುದರ ಮಧ್ಯೆ, ಹಿಂಸಾರೂಪ ಪಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸುರೇಂದ್ರನ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ರಸ್ತೆಗಳನ್ನು ತಡೆದು ಜನರಿಗೆ ತೊಂದರೆ ಕೊಡುವುದರ ಮೂಲಕ ನಡೆಸುತ್ತಿರುವ ಪ್ರತಿಭಟನೆಯು ಅಯ್ಯಪ್ಪನ ಇಚ್ಚೆಗೆ ವಿರುದ್ಧವಾಗಿದೆ. ಆದುದರಿಂದ ಇದೀಗಾಗಲೇ ಹಲವಾರು ಸಂಘ ಸಂಸ್ಥೆಗಳು ಅಪೆಕ್ಸ್ ಕೋರ್ಟಿನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮರುಪರಿಶೀಲಿಸಬೇಕೆಂದು ಮೇಲ್ಮನವಿ ಸಲ್ಲಿಸಿದ್ದು, ಪ್ರತಿಭಟನಕಾರರು ಅದರ ತೀರ್ಪು ಹೊರಬೀಳುವವರೆಗೆ ಶಾಂತಿಯಿಂದಿರಬೇಕೆಂದು ಮನವಿ ಮಾಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group