ರಾಜ್ಯ ಸುದ್ದಿ

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡದಿದ್ದರೆ ಕೇಂದ್ರಕ್ಕೆ ದೂರು-ಸಿದ್ದರಾಮಯ್ಯರಿಗೆ ಯಡಿಯೂರಪ್ಪ ಎಚ್ಚರಿಕೆ

ವರದಿಗಾರ-ಬೆಂಗಳೂರು: ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದ್ದ ಡಿವೈಎಸ್‍ಪಿ ಎಂ.ಕೆ.ಗಣಪತಿ ಯವರ ಆತ್ಮಹತ್ಯೆ ಪ್ರಕರಣದಲ್ಲಿ ‘ಕೆಲ ಸಾಕ್ಷಿಗಳನ್ನು ನಾಶಪಡಿಸಲಾಗಿದೆ’ ಎಂದು ವಿಧಿ-ವಿಜ್ಞಾನ ಪ್ರಯೋಗಾಲಯದಲ್ಲಿ ಬಹಿರಂಗವಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದಲ್ಲಿ ಕೇಂದ್ರಕ್ಕೆ ದೂರು ಕೊಡುವುದಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಆಗಸ್ಟ್ 26ರಂದು ಕೇಂದ್ರ ಗೃಹ ಸಚಿವ ರಾಜನಾಥ್‍ ಸಿಂಗ್ ರನ್ನು ಭೇಟಿಯಾಗಿ ದೂರು ಕೊಡುವುದಾಗಿ ಹೇಳಿ ಕೊಂಡಿದ್ದಾರೆ. ಇದೇ ಸಂದರ್ಭ ಪ್ರಕರಣದ ಹೆಚ್ಚಿನ ತನಿಖೆಗಾಗಿ CBI ಗೆ ಒತ್ತಾಯಿಸುವುದಾಗಿಯೂ ಹೇಳಿದ್ದಾರೆ.

ಪ್ರಕರಣವನ್ನು ಮುಚ್ಚಿಹಾಕಲು ಸರಕಾರ ಹಾಗೂ ಕೆಲ ಪೊಲೀಸ್ ಅಧಿಕಾರಿಗಳು ಷಡ್ಯಂತ್ರ ನಡೆಸಿರುವುದು ಬಹಿರಂಗಗೊಂಡಿದೆ. CID ತನಿಖೆ ಕೇವಲ ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರ ಎಂದು ಮೇಲ್ನೋಟಕ್ಕೆ ಸಾಬೀತಾಗಿದೆ. ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಮೊದಲು ರಾಜೀನಾಮೆ ನೀಡಬೇಕು. ಇಲ್ಲದೇ ಹೋದಲ್ಲಿ ಜನ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಹೇಳಿದರು.

ಈ ಹಿಂದೆ ಆಡಳಿತ ನಡೆಸಿದ ಯಾವುದೇ ಮುಖ್ಯಮಂತ್ರಿಗಳು ಈ ರೀತಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ನಿದರ್ಶನಗಳಿಲ್ಲ. ಇತಿಹಾಸವು ಸಿದ್ದರಾಮಯ್ಯರನ್ನು ಎಂದಿಗೂ ಕ್ಷಮಿಸುವುದಿಲ್ಲ. ಮಾಡಿರುವ ಪಾಪಕ್ಕೆ ಮುಂದೊಂದು ದಿನ ಖಂಡಿತ ಫಲ ಅನುಭವಿಸಿಯೇ ತೀರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group