ರಾಜ್ಯ ಸುದ್ದಿ

ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ನಾಡಿಗೆ ಬಗೆವ ದ್ರೋಹ: ಸಿದ್ದರಾಮಯ್ಯ

‘ಟಿಪ್ಪು ಸುಲ್ತಾನ್ ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ’

ಟಿಪ್ಪು ಜಯಂತಿ ಆಚರಣೆ ಬಗ್ಗೆ ಬಿಜೆಪಿ ನಿಲುವು ಆತ್ಮವಂಚನೆಯಿಂದ ಕೂಡಿದ್ದಾಗಿದೆ.

ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ

ವರದಿಗಾರ (ನ.10): ದೇಶದ ಸ್ವಾತಂತ್ರ್ಯಕ್ಕಾಗಿ ತನ್ನನ್ನು ದೇಶಕ್ಕೆ ಅರ್ಪಿಸಿದ ಟಿಪ್ಪು ಸುಲ್ತಾನರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ನವೆಂಬರ್ 10, ಟಿಪ್ಪು ಜಯಂತಿಯ ಬಗ್ಗೆ ತನ್ನ ಟ್ವಿಟ್ಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ‘ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ’ ಎಂದು ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ವಿವಾದದಂತೆ ಮಾಡಿರುವ ಬಿಜೆಪಿ ಮತ್ತು ಅದರ ನಾಯಕರಿಗೆ ಸ್ಪಷ್ಟಪಡಿಸಿದ್ದಾರೆ.

ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹವೆಂದೂ ಹೇಳಿದ್ದಾರೆ.

‘ಟಿಪ್ಪು ಜಯಂತಿ ಆಚರಣೆ ಬಗ್ಗೆ ಬಿಜೆಪಿ ನಿಲುವು ಆತ್ಮವಂಚನೆಯಿಂದ ಕೂಡಿದ್ದಾಗಿದೆ. ತಾವು ಅಧಿಕಾರದಲ್ಲಿದ್ದಾಗ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿ, ಟಿಪ್ಪುವನ್ನು ಹಾಡಿ-ಹೊಗಳಿ, ಪುಸ್ತಕ ಬರೆಸಿ ಈಗ ವಿರೋಧಿಸುತ್ತಿರುವುದು ಸ್ವಾರ್ಥರಾಜಕಾರಣವಲ್ಲದೆ ಮತ್ತೇನು?’ ಎಂದು ಅವರು ಪ್ರಶ್ನಿಸಿದ್ದಾರೆ.

ತನ್ನ ಮತ್ತೊಂದು ಟ್ವೀಟ್ ನಲ್ಲಿ, ‘ಸರ್ಕಾರವೇ ಜಯಂತಿಗಳನ್ನು ಆಚರಿಸುವುದಕ್ಕೆ ಕಾರಣವಿದೆ. ಇದನ್ನು ಸಾರ್ವಜನಿಕರಿಗೆ ಬಿಟ್ಟರೆ ತಮ್ಮ ಜಾತಿ-ಧರ್ಮಗಳಿಗೆ ಸೇರಿರುವ ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯನ್ನಷ್ಟೇ ಮಾಡಿ ಅವರನ್ನು ತಮ್ಮ ಜಾತಿ-ಧರ್ಮಗಳಿಗೆ ಸೀಮಿತಗೊಳಿಸುತ್ತಾರೆ. ಇದು ಮಹಾನ್ ವ್ಯಕ್ತಿಗಳಿಗೆ ಅಗೌರವವೂ ಹೌದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ,ಜಾತ್ಯತೀತ ಧೋರಣೆ,ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ. ಈ ಲಾವಣಿ, ಪದ,ಹಾಡುಗಳೇನಿಜವಾದ ಇತಿಹಾಸ’.

‘ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ, ಒಂದು ಸಂಸ್ಥಾನದ ರಾಜ ಎನ್ನುವ ವಾದ ಹುಟ್ಟಿಕೊಂಡಿದೆ. ಇಂತಹ ಮೊಂಡುವಾದದವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ,ವೀರ ಸಿಂಧೂರ ಲಕ್ಷ್ಮಣ,ರಾಣಿ ಅಬ್ಬಕ್ಕದೇವಿ ಸೇರಿದಂತೆ ಬ್ರಿಟಿಷರ ವಿರುದ್ದ ಹೋರಾಡಿ ಪ್ರಾಣಾರ್ಪಣೆ ಮಾಡಿದವರನ್ನು ಯಾವ ಗುಂಪಿಗೆ ಸೇರಿಸುತ್ತಾರೆ?’ ಎಂದು ರಾಜ್ಯ ಬಿಜೆಪಿಯನ್ನು ಅವರು ಪ್ರಶ್ನಿಸಿದ್ದಾರೆ.

‘ಟಿಪ್ಪು ಯುದ್ಧದ ವೇಳೆ ಜನರನ್ನು ಸಾಯಿಸಿದ್ದ ಲೂಟಿ ಮಾಡಿದ್ದ ಎನ್ನುವುದು ವಿರೋಧಿಗಳ ಆರೋಪ. ಟಿಪ್ಪು ಕಾಲದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ, ಟಿಪ್ಪು ಪ್ರಜಾತಾಂತ್ರಿಕವಾಗಿ ಆಯ್ಕೆಯಾದವನ್ನಲ್ಲ. ಆತ ಒಬ್ಬ ರಾಜ. ಆ ಕಾಲದಲ್ಲಿ ಯುದ್ದಧರ್ಮಕ್ಕೆ ತಕ್ಕಂತೆ ನಡೆದುಕೊಂಡಿದ್ದ’ ಎಂದು ಹೇಳಿದ್ದಾರೆ.

ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ. ಇದಕ್ಕಾಗಿ ಬಿಜೆಪಿ ಸರ್ಕಾರವೇ ಪ್ರಕಟಿಸಿದ ಪುಸ್ತಕ ಓದಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group