ರಾಜ್ಯ ಸುದ್ದಿ

ಪ್ರವಾದಿ ನಿಂದನೆಗೈದ ಮತಾಂಧ ಪತ್ರಕರ್ತ ಸಂತೋಷ್ ತಮ್ಮಯ್ಯನ ಬಂಧನ

ವರದಿಗಾರ (ನ 13) :  ನವಂಬರ್ 5 ರಂದು ಗೋಣಿಕೊಪ್ಪದಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಸ್ವಾತಂತ್ರ್ಯ ಹೋರಾಟದ ವೀರ ಸೇನಾನಿ ಟಿಪ್ಪು ಸುಲ್ತಾನನನ್ನು ವಿರೋಧಿಸುವ ಭರದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳ ಮೂಲಕ ನಿಂದನೆಗೈದಿದ್ದ ಮತಾಂಧ ಪತ್ರಕರ್ತ ಸಂತೋಷ್ ತಮ್ಮಯ್ಯನನ್ನು  ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.

ಗೋಣಿಕೊಪ್ಪದ ಕಾರ್ಯಕ್ರಮದಲ್ಲಿ ಟಿಪ್ಪುವನ್ನು ಟೀಕಿಸುವ ಭರದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ತನ್ನ ವಿಷಕಾರಿ ನಾಲಗೆಯನ್ನು ಮತಾಂಧ ಪತ್ರಕರ್ತ ಸಂತೋಷ್ ತಮ್ಮಯ್ಯ ಹರಿಯಬಿಟ್ಟಿದ್ದ. ಇದರ ವಿರುದ್ಧ ಸಿದ್ಧಾಪುರದ ಕೆ ಎ ಅಸ್ಕರ್ ಎಂಬುವವರು ದೂರು ನೀಡೀದ್ದು, ಅದರಂತೆ ಸಂತೋಷ್ ತಮ್ಮಯ್ಯ, ಬಾಚರಣಿಯಂಡ ಪಿ ಅಪ್ಪಣ್ಣ, ಅಡ್ಡಂಡ ಕಾರ್ಯಪ್ಪ, ಸುಧಾಕರ್ ಹೊಸಳ್ಳಿ, ರಾಬರ್ಟ್ ರೊಝಾರಿಯೋ ಎಂಬವರ ವಿರುದ್ಧ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.

ಮತಾಂಧ ಸಂತೋಷ್ ತಮ್ಮಯ್ಯನ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರಿಗೆ ಆತ ಅಲ್ಲಿಂದ 300 ಕಿ ಮೀ ದೂರದ ಮಧುಗಿರಿ ತಾಲೂಕಿನ ಹಳ್ಳಿಯೊಂದರಲ್ಲಿ ತನ್ನ ಪತ್ನಿಯ ಮನೆಯಲ್ಲಿ ಅಡಗಿ ಕೂತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಸೋಮವಾರ ತಡರಾತ್ರಿ ಮನೆಗೆ ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸುವ ಸಾಧ್ಯತೆ ಇದೆಯೆನ್ನಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group