ಅನಿವಾಸಿ ಕನ್ನಡಿಗರ ವಿಶೇಷ

ಸಾಮಾಜಿಕ ನ್ಯಾಯವನ್ನು ಖಾತರಿಗೊಳಿಸದ ಹೊರತಾಗಿ ಭಾರತದ ಸ್ವಾತಂತ್ರ್ಯವೂ ಪರಿಪೂರ್ಣವೆನಿಸದು: ನಝೀರ್ ತುಂಬೆ

ವರದಿಗಾರ-ಸೌದಿ ಅರೇಬಿಯಾ: ಸಾಮಾಜಿಕ ನ್ಯಾಯವನ್ನು ಖಾತರಿಗೊಳಿಸದ ಹೊರತಾಗಿ ಭಾರತದ ಸ್ವಾತಂತ್ರ್ಯವೂ ಪರಿಪೂರ್ಣವೆನಿಸದು ಎಂದು ಇಂಡಿಯನ್ ಸೋಶಿಯಲ್ ಫೋರಂ ಖೋಬರ್  ಕಾರ್ಯಕಾರಿ ಸಮಿತಿ ಸದಸ್ಯ ನಜೀರ್ ತುಂಬೆ ಹೇಳಿದ್ದಾರೆ. 

ಅವರು ಭಾರತದ 71ನೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂಡಿಯನ್ ಸೋಶಿಯಲ್ ಫೋರಂ ಕರ್ನಾಟಕ ರಾಜ್ಯ ಸಮಿತಿಯು ಇತ್ತೀಚೆಗೆ ಅನಿವಾಸಿ ಭಾರತೀಯರಿಗಾಗಿ ಜುಬೈಲ್ ಹೋಟೆಲ್ ಕುಕ್ಸೋನ್ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಮುಖ್ಯ ಭಾಷಣವನ್ನು ಮಾಡುತ್ತಿದ್ದರು.

ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಎಲ್ಲ ಧರ್ಮದ ಜನರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಸಾಹಿತಿಗಳು, ದಲಿತರು, ಅಲ್ಪಸಂಖ್ಯಾತರು ಹೋರಾಟ ನಡೆಸಿ ಪ್ರಾಣ ತ್ಯಾಗ ಮಾಡಿದ್ದರು. ಸ್ವತಂತ್ರ ಭಾರತದಲ್ಲೂ ಅಲ್ಪಸಂಖ್ಯಾತರು, ದಲಿತರು, ಮಹಿಳೆಯರು, ಸಾಹಿತಿಗಳು, ವಿದ್ಯಾರ್ಥಿಗಳು ಆಹಾರದ ಸ್ವಾತಂತ್ರ್ಯ, ಬದುಕುವ ಸ್ವಾತಂತ್ರ್ಯ, ಮಾತನಾಡುವ ಸ್ವಾತಂತ್ರ್ಯಕ್ಕಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಸ್ವಾತಂತ್ರ್ಯದ ಅಣಕವಾಗಿದೆ. ಇದರಿಂದಾಗಿಯೇ, 47ರ ಸ್ವಾತಂತ್ರ್ಯ ಯಾರಿಗೆ ಬಂತು? ಎಲ್ಲಿಗೆ ಬಂತು? ಎಂಬ ಪ್ರಶ್ನೆ ಈಗಲೂ ಜನಸಾಮಾನ್ಯರನ್ನು ಕಾಡುತ್ತಿದೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇಂಡಿಯನ್ ಸೋಶಿಯಲ್ ಫೋರಂ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷ ಎ.ಎಂ. ಆರಿಫ್ ಜೋಕಟ್ಟೆ, ದೇಶಪ್ರೇಮವೆಂದರೆ ಕೇವಲ ಸರಕಾರವನ್ನು ಪ್ರೀತಿಸುವುದು ಎಂದರ್ಥವಲ್ಲ. ಜನವಿರೋಧಿ ನೀತಿಗಳ ವಿರುದ್ಧ ದನಿಯೆತ್ತಿ, ಸಾಮಾಜಿಕ ನ್ಯಾಯದ ಪರ ಹೋರಾಟ ರಂಗದಲ್ಲಿ ಇರುವುದು ನಿಜವಾದ ದೇಶಪ್ರೇಮ. ದೇಶದ ಭವಿಷ್ಯದ ಬಗ್ಗೆ ಚಿಂತಿಸುತ್ತಾ, ಅದರ ಎಲ್ಲ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದರು.

ವೇದಿಕೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಮ್ ಈಶ್ಟರ್ನ್ ಪ್ರಾವಿನ್ಸ್ ಅಧ್ಯಕ್ಷ  ಅತಾವುಲ್ಲ ಉಚ್ಚಿಲ, ಜುಬೈಲ್  ಇಂಡಿಯನ್ ಸೋಶಿಯಲ್ ಫೋರಂ ಉಪಾಧ್ಯಕ್ಷರಾದ  ಇಬ್ರಾಹಿಂ ವೇಣೂರ್  ಉಪಸ್ಥಿತರಿದ್ದರು.

ಸ್ವಾತಂತ್ರೋತ್ಸವದ ಅಂಗವಾಗಿ ಜುಬೈಲ್ ನಲ್ಲಿ ವಿವಿಧ ಕ್ರೀಡಾ ಕೂಟಗಳನ್ನು ಏರ್ಪಡಿಸಲಾಗಿತ್ತು. ಕ್ರೀಡಾಕೂಟದ ವಿಜೇತರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಐ.ಎಸ್.ಎಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಶ್ರಫ್ ಕುಕ್ಕಾಜೆ  ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಜುಬೈಲ್ ಬ್ರಾಂಚ್ ಸದಸ್ಯ ಮುಹಮ್ಮದ್ ಸಾಮತ್ ಕಾರ್ಯಕ್ರಮ ನಿರೂಪಿಸಿ, ಜುಬೈಲ್ ಐ.ಎಸ್.ಎಫ್ ಉಪಾಧ್ಯಕ್ಷರಾದ  ಇಬ್ರಾಹಿಂ ವೇಣೂರ್  ವಂದಿಸಿದರು.

ಐಕ್ಯತಾ  ಗಾನ ಸಾರೆ ಜಹಾಂಸೆ ಅಚ್ಚಾ ಧ್ವಜ ಗೌರವ ಸೂಚಕದೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿ,  ರಾಷ್ಟ್ರಗೀತೆಯೊಂದಿಗೆ  ಕಾರ್ಯಕ್ರಮ ಮುಕ್ತಾಯಕ್ಕೆ ಸಾರ್ವಜನಿಕರು ಎದ್ದು ನಿಂತು ಗೌರವ ಸಲ್ಲಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group