ಜಿಲ್ಲಾ ಸುದ್ದಿ

ಬಂಟ್ವಾಳ: ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ವರದಿಗಾರ-ಬಂಟ್ವಾಳ: ಮಂಚಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟವು ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕಾಜೆಯಲ್ಲಿ ಅದ್ದೂರಿಯಾಗಿ ಜರುಗಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಮೀಳಾ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್, ಕುಕ್ಕಾಜೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಹಮೀದ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಡಿ.ಕೆ.ಹಂಝ, ಬಂಟ್ವಾಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್, ಕುಕ್ಕಾಜೆ ನವಯುಗ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಪಿ.ಕೆ.ಹಸೈನಾರ್, ಮಂಚಿ ಲಯನ್ಸ್ ಸದಸ್ಯ ರೆವರಂಡ್ ರೊಸಾರಿಯೋ,  ಕೊಳ್ನಾಡು ಗಂಗಾಧರ್, ಕುಕ್ಕಾಜೆ ಶಾಲೆ ಶಿಕ್ಷಕಿ ಸುಮಿತ್ರ ಮತ್ತು ಸಹಶಿಕ್ಷಕರು, ಎಸ್.ಡಿ.ಎಂ.ಸಿಸದಸ್ಯರು ವಿದ್ಯಾರ್ಥಿಗಳು, ಮತ್ತು ಪೋಷಕರು ಉಪಸ್ಥಿತರಿದ್ದರು.
ಬಳಿಕ ನಡೆದ ಪಂದ್ಯಾಟದಗಳಲ್ಲಿ ಬಾಲಕರ ವಿಭಾಗದದಲ್ಲಿ ಅಲ್ ಮದೀನಾ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನವನ್ನು ಪಡೆದಿದೆ. ಶಾರದಾ ಗಣಪತಿ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುರಿಬೈಲು ಪ್ರಥಮ ಸ್ಥಾನ ಪಡೆದರೆ, ಸ.ಹಿಪ್ರಾ.ಶಾಲೆ ಕುಳಾಲು ದ್ವಿತೀಯ ಸ್ಥಾನ ಪಡೆದಿದೆ.
ವಿಜಯಿಯಾದ ತಂಡಗಳಿಗೆ ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿಯವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group