ರಾಷ್ಟ್ರೀಯ ಸುದ್ದಿ

ಮಧ್ಯಪ್ರದೇಶ ವಿಧಾನಸಭಾ ಚುನಾವಣಾ; 250ಕ್ಕೂ ಹೆಚ್ಚು ಇವಿಎಂ ಯಂತ್ರ ಕೈ ಕೊಡಲು ಬಿಜೆಪಿಯ ಕುತಂತ್ರವೇ ಕಾರಣ: ಕಾಂಗ್ರೆಸ್ ಆರೋಪ

ಮಧ್ಯಪ್ರದೇಶದಲ್ಲಿ ಶೇ.74.6, ಮಿಜೋರಾಂನಲ್ಲಿ ಶೇ.71 ಮತದಾನ

ವರದಿಗಾರ (ನ.28): ತೀವ್ರ ಕುತೂಹಲ ಸೃಷ್ಟಿಸಿರುವ ಪಂಚರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ. ಇಂದು ಮಧ್ಯಪ್ರದೇಶ ಮತ್ತು ಮಿಜೋರಾಂ ವಿಧಾನಸಭೆಗಳಿಗೆ ಮತದಾನ ನಡೆದಿದೆ. ಮಧ್ಯಪ್ರದೇಶದಲ್ಲಿ ಸುಮಾರು 250ಕ್ಕೂ ಹೆಚ್ಚು ಇವಿಎಂಗಳು ಕೈಕೊಟ್ಟಿದ್ದು, ‘ಪಕ್ಷ ಬಲವಾಗಿರುವ ಕಡೆಯೇ ಇವಿಎಂಗಳು ಕೆಟ್ಟಿವೆ. ಇದು ಬಿಜೆಪಿಯ ಕುತಂತ್ರ. ಹಾಗಾಗಿ ಮತಯಂತ್ರ ದೋಷಕಂಡು ಬಂದ ಮತಗಟ್ಟೆಗಳಲ್ಲಿ ಮರುಮತದಾನ ನಡೆಸಬೇಕೆಂದು’ ಮಧ್ಯಪ್ರದೇಶ ಕಾಂಗ್ರೆಸ್​ ನಾಯಕರು ಈ ಸಂದರ್ಭ ಒತ್ತಾಯಿಸಿದ್ದಾರೆ.

ಚುನಾವಣೆಯ ಸಂದರ್ಭದಲ್ಲಿ ಇವಿಯಂ ಯಂತ್ರ ಕೆಟ್ಟಿದ್ದು ಮತಯಂತ್ರಗಳನ್ನು ಬದಲಿಸಿ, ಹೊಸ ಮತಯಂತ್ರಗಳನ್ನು ಚುನಾವಣಾ ಆಯೋಗ ಒದಗಿಸಿದೆ ಎಂದು ಮೂಲಗಳು ವರದಿ ಮಾಡಿವೆ. ಮಧ್ಯಪ್ರದೇಶದಲ್ಲಿ 230 ಹಾಗೂ ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳಿಗೆ ಇಂಡು ಮತದಾನ ನಡೆದಿದೆ. ಮಧ್ಯಪ್ರದೇಶದಲ್ಲಿ ಶೇ.74.6, ಮಿಜೋರಾಂನಲ್ಲಿ  ಶೇ.71 ಮತದಾನವಾಗಿದೆ ಎಂದು ವರದಿಯಾಗಿದೆ.

ಚುನಾವಣೆಯ ಸಂದರ್ಭ ಹೃದಯಾಘಾತದಿಂದ ಮೂರು ಮತಗಟ್ಟೆ ಅಧಿಕಾರಿಗಳು ಮೃತಪಟ್ಟಿದ್ದು, ಮೃತರ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಮಧ್ಯಪ್ರದೇಶದ ಬಿಂದ್​ ಪ್ರದೇಶದಲ್ಲಿ ಗುಂಡಿನ ದಾಳಿ ಆಗಿರುವ ಬಗ್ಗೆ ವರದಿಯಾಗಿದೆ.

ಮಧ್ಯಪ್ರದೇಶದಲ್ಲಿ ಕಳೆದ 3 ಅವಧಿಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ಆಡಳಿತ ವಿರೋಧಿ ಅಲೆಯ ಲಾಭ ಪಡೆದು ಬಿಜೆಪಿಯ 15 ವರ್ಷಗಳ ಆಳ್ವಿಕೆಯನ್ನು ಅಂತ್ಯ ಮಾಡುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್​ ಇದೆ. ಇನ್ನು ಮಿಜೋರಾಂನಲ್ಲಿ ಕಾಂಗ್ರೆಸ್​ ನೇತೃತ್ವದ ಸರ್ಕಾರ ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ಹವಣಿಕೆಯಲ್ಲಿದೆ.

ಈಶಾನ್ಯದಲ್ಲಿ ಕಾಂಗ್ರೆಸ್​​ ಅಧಿಕಾರದಲ್ಲಿರುವ ಏಕೈಕ ರಾಜ್ಯ ಎಂದರೆ ಮಿಜೋರಾಂ. ಹಾಗಾಗಿ ಇಲ್ಲಿ ಅಧಿಕಾರ ಉಳಿಸಿಕೊಳ್ಳಲೇ ಬೇಕಾದ ಅನಿವಾರ್ಯತೆ ಕಾಂಗ್ರೆಸ್​ಗಿದೆ. ಇನ್ನು ಮಿಜೋರಾಂನಲ್ಲಿ ಕಮಲ ಅರಳಿಸುವ ಮೂಲಕ ಈಶಾನ್ಯ ರಾಜ್ಯಗಳ ಮೇಲೆ ಅಧಿಪತ್ಯ ಸಾಧಿಸುವ ಉದ್ದೇಶ ಬಿಜೆಪಿಯದ್ದು.

ಮಧ್ಯಪ್ರದೇಶದಲ್ಲಿ ಈ ಬಾರಿಯ ಚುನಾವಣಾ ಅಖಾಡ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್​ ನಾಯಕರು ತಮ್ಮ ನಡುವೆ ಇರುವ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಪ್ರಚಾರ ನಡೆಸುವ ಮೂಲಕ ಪಕ್ಷಕ್ಕೆ ಗೆಲುವು ತಂದುಕೊಡಲು ಮುಂದಾಗಿದ್ದಾರೆ. 2019ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಹಾಗಾಗಿ ಈ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹಳ ಮಹತ್ವದ್ದಾಗಿದೆ. ಇದರ ಫಲಿತಾಂಶ ಸಾರ್ವತ್ರಿಕ ಚುನಾವಣೆಯ ಮೇಲೆ ಪ್ರಭಾವ ಬೀರಲಿದೆ ಎಂದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group