ರಾಷ್ಟ್ರೀಯ ಸುದ್ದಿ

ಅತ್ಯಾಚಾರ ಪ್ರಕರಣ-ರಾಮ್ ರಹೀಮ್ ಸಿಂಗ್ ಆರೋಪಿ: ಬುಗಿಲೆದ್ದ ಹಿಂಸಾಚಾರ, 30ಕ್ಕೂ ಅಧಿಕ ಸಾವು

ವರದಿಗಾರ-ಚಂಡೀಗಢ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಡೇರಾ ಸಚ್ಚಾ ಸೌದದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಆರೋಪಿ ಎಂದು ಪಂಚಕುಲಾ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 28ರಂದು ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿಕೆ ನೀಡಿದೆ.

ತೀರ್ಪು ಪ್ರಕಟವಾದ ಬೆನ್ನಲ್ಲೇ ಗುರ್ಮೀತ್ ರಾಮ್ ರಹೀಮ್ ಸಿಂಗ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಂಚಕುಲಾದ ಚಾಂದಿ ಮಂದಿರ್ ಸೇನಾ ಠಾಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಹರಿಯಾಣದ ಅಂಬಾಲ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.

ತೀರ್ಪು ಪ್ರಕಟವಾದ ತಕ್ಷಣ ತುರ್ತು ಕಾರ್ಯಪಡೆಯ ಸಿಬ್ಬಂದಿ ಸಿಬಿಐ ನ್ಯಾಯಾಲಯದ ಸುತ್ತ ಪಥಸಂಚಲನ ನಡೆಸಿ ಅಶ್ರುವಾಯು ಪ್ರಯೋಗ ನಡೆಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಡೇರಾ ಸಚ್ಚಾ ಸೌದ ಸಿರ್ಸಾದಲ್ಲಿರುವ ಪ್ರಧಾನ ಕಚೇರಿಯನ್ನು ಭದ್ರತಾಪಡೆಗಳು ಸಂಪೂರ್ಣವಾಗಿ ಸುತ್ತುವರಿದಿದ್ದಾರೆ. ಹರಿಯಾಣದಾದ್ಯಂತ ಬಂದ್‌ ವಾತಾವರಣ ಸೃಷ್ಟಿಯಾಗಿದೆ. ಸಿಬಿಐ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ ಅವರ ಅನುಯಾಯಿಗಳು ಹಿಂಸಾಚಾರಕ್ಕಿಳಿದಿದ್ದಾರೆ.

ಹಿಂಸಾಚಾರಕ್ಕಿಳಿದಿರುವ ಬೆಂಬಲಿಗರಿಗೆ ಶಾಂತಿ ಕಾಪಾಡುವಂತೆ ಹರಿಯಾಣದ ಮುಖ್ಯಮಂತ್ರಿ ಮನೋಹರ್‌ ಲಾಲ್ ಖಟ್ಟರ್ ಮನವಿ ಮಾಡಿಕೊಂಡಿದ್ದಾರೆ. ಯಾವುದೇ ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಸನ್ನದ್ಧವಾಗಿವೆ ಎಂದು ಅವರು ಇದೇ ಸಂದರ್ಭ ತಿಳಿಸಿದ್ದಾರೆ.

ಪಂಚಕುಲಾದಲ್ಲಿ ಹಿಂಸಾಚಾರಕ್ಕೆ ಮೂವತ್ತಕ್ಕೂ ಹೆಚ್ಚು ಜನ ಬಲಿಯಾಗಿದ್ದು, 250ಕ್ಕಿಂತಲೂ ಅಧಿಕ ಜನ ಗಾಯಗೊಂಡಿದ್ದಾರೆ. ನೂರಾರು ವಾಹನಗಳು ಜಖಂಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ಕೆಲವು ಬೆಂಬಲಿಗರು ನ್ಯಾಯಾಲಯದ ಆವರಣದಲ್ಲಿ ಮಾಧ್ಯಮದವರ ಮೇಲೂ ಹಲ್ಲೆ ನಡೆಸಿದ್ದಾರೆ. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕೆಲ ಮೂಲಗಳ ಪ್ರಕಾರ, ಎರಡು ರೈಲು ನಿಲ್ದಾಣಗಳಿಗೆ ರಾಮ್ ರಹೀಮ್ ಸಿಂಗ್ ಅನುಯಾಯಿಗಳು ಬೆಂಕಿ ಹಚ್ಚಿದ್ದಾರೆ.

ರಹೀಮ್ ಸಿಂಗ್ ಅನುಯಾಯಿಗಳು ಹಿಂಸಾಚಾರಕ್ಕಿಳಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪಂಜಾಬ್‌ನ ಐದು ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ ಎಂದು ತಿಳಿದು ಬಂದಿದೆ.

ಹಿಂಸಾಚಾರ ಬುಗೆಲೆದ್ದ ನಡುವಿನಲ್ಲಿ ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್, ಗುರ್ಮೀತ್ ರಾಮ್ ರಹೀಮ್ ಸಿಂಗ್ ‘ಒಬ್ಬ ಉದಾತ್ತ ವ್ಯಕ್ತಿ’ ಎಂದು ಹೇಳಿಕೆ ನೀಡಿದ್ದು, ರಾಮ್ ರಹೀಮ್ ಸಿಂಗ್ ವಿರುದ್ಧವಾಗಿ ನೀಡಲಾಗಿರುವ ನ್ಯಾಯಾಲಯದ ತೀರ್ಪು ಒಪ್ಪುವಂತದ್ದಲ್ಲ. ಒಂದು ಮಹಿಳೆ ದೂರು ನೀಡಿದ್ದು, ಕೋಟ್ಯಾಂತರ ಜನ ಅವರನ್ನು ಬೆಂಬಲಿಸಿದ್ದಾರೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದು, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯಲು ಪ್ರಯತ್ನಿಸಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group